ದೇಶ

ಟ್ರಂಪ್ ಎಚ್ಚರಿಕೆಯ ಬೆನ್ನಲ್ಲೇ ಪಾಕ್‍ನಿಂದ ಗುಂಡಿನ ದಾಳಿ, ಭಾರತೀಯ ಯೋಧ ಹುತಾತ್ಮ, 2 ಪೊಲೀಸರಿಗೆ ಗಾಯ!

ಭಾರತದಲ್ಲಿ ಇನ್ನೂ ಒಂದು ಉಗ್ರ ದಾಳಿ ನಡೆದರೂ ಗ್ರಹಚಾರ ನೆಟ್ಟಗಿರಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಬೆನ್ನಲ್ಲೇ ಪಾಕ್ ಕದನ ವಿರಾಮ...

ಟ್ರಂಪ್ ಎಚ್ಚರಿಕೆಯ ಬೆನ್ನಲ್ಲೇ ಪಾಕ್‍ನಿಂದ ಗುಂಡಿನ ದಾಳಿ, ಭಾರತೀಯ ಯೋಧ ಹುತಾತ್ಮ, 2 ಪೊಲೀಸರಿಗೆ ಗಾಯ!
ಭಾರತೀಯ ಸೇನೆ
Published On :
ನವದೆಹಲಿ: ಭಾರತದಲ್ಲಿ ಇನ್ನೂ ಒಂದು ಉಗ್ರ ದಾಳಿ ನಡೆದರೂ ಗ್ರಹಚಾರ ನೆಟ್ಟಗಿರಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಬೆನ್ನಲ್ಲೇ ಪಾಕ್ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಸದ್ಯ ಕೊತ್ತ ಕೊತ ಅಂತ ಕುದಿಯುತ್ತಿದೆ. ಒಂದು ಕಡೆ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿಯಲ್ಲಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಇನ್ನೊಂದೆಡೆ ಉಗ್ರರು ಗ್ರೈನೇಡ್ ದಾಳಿ ನಡೆಸಿದ್ದು ಇಬ್ಬರು  ಪೊಲೀಸರು ಗಾಯಗೊಂಡಿದ್ದಾರೆ. 
ಬರಮುಲ್ಲಾದ ಸೊಪೊರೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು ಇಬ್ಬರು ಜಮ್ಮು ಮತ್ತು ಪೊಲೀಸರು ಗಾಯಗೊಂಡಿದ್ದಾರೆ. ಭಾರತೀಯ ಯೋಧರು ಉಗ್ರರ ದಮನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ. 
ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧನನ್ನು 24 ವರ್ಷದ ಯಶ್ ಪೌಲ್ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.