ಬಿಜೆಪಿ ಟಿಕೆಟ್ ವಂಚಿತ ಎಲ್.ಕೆ. ಆಡ್ವಾಣಿಗೆ ರಾಜ್ಯಸಭೆಯಲ್ಲಿ ಸ್ಥಾನ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ನ ಗಾಂಧಿನಗರದಿಂದ ಸ್ಪರ್ಧಿಸಲು ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಟಿಕೆಟ್ ನಿರಾಕರಿಸಿದ್ದು...
ಎಲ್ ಕೆ ಆಡ್ವಾಣಿ
ಎಲ್ ಕೆ ಆಡ್ವಾಣಿ
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಗುಜರಾತ್ ನ ಗಾಂಧಿನಗರದಿಂದ ಸ್ಪರ್ಧಿಸಲು ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಅವರನ್ನು  ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆ ಇದೆ.
ಸದ್ಯ ರಾಜ್ಯಸಭೆಯ ಸದಸ್ಯರಾಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಡ್ವಾಣಿ ಪ್ರತಿನಿಧಿಸುತ್ತಿದ್ದ ಗಾಂಧಿನಗರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಗೆದ್ದರೆ ಶಾ ರಾಜ್ಯಸಭಾ ಸ್ಥಾನಕ್ಕೆ ಆಡ್ವಾಣಿಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಬಿಜೆಪಿ ಪ್ರಧಾನ ಕಚೇರಿಯ ಮೂಲಗಳ ಪ್ರಕಾರ, ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮುನ್ನ 91 ವರ್ಷದ ಆಡ್ವಾಣಿಯವರು, ತಮಗೆ ವಯಸ್ಸಾಗಿರುವುದರಿಂದ ಚುನಾವಣೆಗೆ ಸ್ಪರ್ಧಿಸುವುದು ಕಷ್ಟವಾಗುತ್ತದೆ. ಆದರೆ ಪಕ್ಷದಲ್ಲಿ ಹಿರಿಯನಾಗಿ ಉಳಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಎನ್ನಲಾಗಿದೆ.
ಗಾಂಧಿನಗರದಿಂದ ನಿರಂತರವಾಗಿ 6 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಡ್ವಾಣಿ ಅವರ ಬದಲು ಅಮಿತ್ ಶಾ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com