ಜಮ್ಮು ಮತ್ತು ಕಾಶ್ಮೀರದ ಸುಂದರ್ ಬನಿ ವಲಯದಲ್ಲಿ ಗುರುವಾರ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಪಾಕ್ ನ ಇಬ್ಬರು ಸೇನಾ ಅಧಿಕಾರಿಗಳು ಸೇರಿದಂತೆ 12 ಸೈನಿಕರಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ 22 ಜನ ಪಾಕ್ ಯೋಧರು ಗಂಭೀರವಾಗಿ ಗಯಗೊಂಡಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.