ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯರ ಅಪಹರಣ,ವರದಿ ಕೇಳಿದ ಸುಷ್ಮಾ ಸ್ವರಾಜ್

ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಪರಿವರ್ತಿಸಲು ಇಬ್ಬರು ಹಿಂದೂ ಯುವತಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿನ ಭಾರತೀಯ ರಾಯಬಾರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವರದಿ ಕೇಳಿದ್ದಾರೆ.
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
Updated on

ನವದೆಹಲಿ:ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಪರಿವರ್ತಿಸಲು ಇಬ್ಬರು ಹಿಂದೂ ಯುವತಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿನ ಭಾರತೀಯ ರಾಯಬಾರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ವರದಿ ಕೇಳಿದ್ದಾರೆ.

ಮಾಧ್ಯಮಗಳ ವರದಿಯನ್ನು ಟ್ವೀಟ್ ನಲ್ಲಿ ಟ್ಯಾಗ್ ಮಾಡಿರುವ ಸುಷ್ಮಾ ಸ್ವರಾಜ್ , ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ  ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮೀಷನರ್ ಅವರನ್ನು ಕೇಳಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಸಿಂಧೂ ಪ್ರಾಂತ್ಯದ ಗೊಟ್ಕಿ ಜಿಲ್ಲೆಯ ಡಾರ್ಕಿ ಪಟ್ಟಣದಲ್ಲಿ ಹೋಳಿ ಹಬ್ಬದಂದು ಅಪಹರಣ ಪ್ರಕರಣ ನಡೆದಿದ್ದು, ಹಿಂದೂ ಸಮುದಾಯದವರು ಪ್ರತಿಭಟನೆ ನಡೆಸಿ, ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ  ಒತ್ತಾಯಿಸಿದ್ದಾರೆ.

ಪಾಕಿಸ್ತಾನದಲ್ಲಿನ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯ ಸಮಸ್ಯೆಯನ್ನು ಭಾರತ ಪ್ರಸ್ತಾಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com