ವೈಮಾನಿಕ ದಾಳಿಯ ಕ್ರೆಡಿಟ್ ಯಾರೂ ತೆಗೆದುಕೊಳ್ಳಬಾರದು, ರಾಜಕೀಯಗೊಳಿಸಬಾರದು: ಗಡ್ಕರಿ

ಪಾಕಿಸ್ತಾನದ ಬಾಲಕೋಟ್ ಮೇಲೆ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯನ್ನು ಲೋಕಸಭೆ ಚುನಾವಣೆಯಲ್ಲಿ ಬಳಸಿಕೊಳ್ಳಬಾರದು...
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
ನವದೆಹಲಿ: ಪಾಕಿಸ್ತಾನದ ಬಾಲಕೋಟ್ ಮೇಲೆ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯನ್ನು ಲೋಕಸಭೆ ಚುನಾವಣೆಯಲ್ಲಿ ಬಳಸಿಕೊಳ್ಳಬಾರದು. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಮತ್ತು ಅದರ ಕ್ರೆಡಿಟ್ ಅನ್ನು ತೆಗೆದುಕೊಳ್ಳಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
ವೈಮಾನಿಕ ದಾಳಿಯನ್ನು ಲೋಕಸಭೆ ಚುನಾವಣೆಗೆ ಲಿಂಕ್ ಮಾಡಬಾರದು. ಚುನಾವಣೆಯ ಲಾಭಕ್ಕಾಗಿ ಅದನ್ನು ಯಾರೂ ಬಳಸಿಕೊಳ್ಳಬಾರದು ಎಂದು ಹೆದ್ದಾರಿ ಹಾಗೂ ಸಾರಿಗೆ ಸಚಿವ ಗಡ್ಕರಿ ಅವರು ಐಎಎನ್ ಎಸ್ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆದರೂ ಆಡಳಿತ ಪಕ್ಷ ಲೋಕಸಭೆ ಚುನಾವಣೆ ರ್ಯಾಲಿಗಳಲ್ಲಿ ವೈಮಾನಿಕ ದಾಳಿಯನ್ನು ಪ್ರಸ್ತಾಪಿಸುವುದು ಏಕೆ? ಎಂಬ ಪ್ರಶ್ನೆಗೆ ಉತ್ತರಿಸಿದ ಗಡ್ಕರಿ, ಭದ್ರತೆ ನಮ್ಮ ಮೊದಲ ಆದ್ಯತೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಹುತಾತ್ಮ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿವುದು ಮತ್ತು ಪಾಕಿಸ್ತಾನ ಭಾಷೆಯಲ್ಲಿ ಮಾತನಾಡುವುದು ದೇಶದ ಹಿತಾಸಕ್ತಿಗೆ ವಿರುದ್ಧವಾದದ್ದು ಎಂದಿದ್ದಾರೆ.
ಇದೇ ವೇಳೆ ತಾವೂ ಪ್ರಧಾನಿ ರೇಸ್ ನಲ್ಲಿರುವ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಗಡ್ಕರಿ, ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಈ ಬಾರಿ 2014ರ ಲೋಕಸಭೆಗಿಂತಲೂ ದೊಡ್ಡ ಗೆಲುವು ಸಾಧಿಸಿ ಮೋದಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com