ಅಮೆರಿಕ ಅಧ್ಯಕ್ಷ ಟ್ರಂಪ್ ಹಿಂದಿಕ್ಕಿದ ಪ್ರಧಾನಿ ಮೋದಿ, ಮಾಜಿ ಅಧ್ಯಕ್ಷ ಒಬಾಮಾ ಈಗಲೂ ನಂಬರ್ ಒನ್!

ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವದ ಪ್ರಭಾವಿ ರಾಜಕಾರಣಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2ನೇ ಸ್ಥಾನದಲ್ಲಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವದ ಪ್ರಭಾವಿ ರಾಜಕಾರಣಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2ನೇ ಸ್ಥಾನದಲ್ಲಿದ್ದಾರೆ.
ಡಿಜಿಟಲ್ ಮಾರ್ಕೆಟಿಂಗ್ ಸಂಸ್ಥೆ ಸೆಮ್ ರಷ್ (SEMrush) ಈ ಬಗ್ಗೆ ವರದಿ ಬಿಡುಗಡೆ ಮಾಡಿದ್ದು, ವರದಿಯಲ್ಲಿರುವಂತೆ ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ವಿಶ್ವದ ಪ್ರಭಾವಿ ರಾಜಕಾರಣಿಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಒಟ್ಟು (ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಮ್ ಸೇರಿದಂತೆ) 110.9 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಈ ಪೈಕಿ ಪ್ರಧಾನಿ ಮೋದಿಗೆ ಫೇಸ್ ಬುಕ್ ನಲ್ಲಿ 43 ಮಿಲಿಯನ್ ಫಾಲೋವರ್ಸ್ ಗಳಿದ್ದು, ಟ್ವಿಟರ್ ನಲ್ಲಿ 47 ಮಿಲಿಯನ್ ಮತ್ತು ಇನ್ ಸ್ಟಾಗ್ರಾಮ್ ನಲ್ಲಿ 20 ಮಿಲಿಯನ್ ಫಾಲೋವರ್ಸ್ ಗಳಿದ್ದಾರೆ.
ಆ ಮೂಲಕ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ರನ್ನು ಹಿಂದಿಕ್ಕಿದ್ದು, 96 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿರುವ ಡೊನಾಲ್ಡ್ ಟ್ರಂಪ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಆದರೆ ಟ್ವಿಟರ್ ನಲ್ಲಿ 59.8 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿರುವ ಟ್ರಂಪ್, ಈಗಲೂ ಟ್ವಿಟರ್ ನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿರುವ ರಾಜಕಾರಣಿಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
ಇನ್ನು ಪಟ್ಟಿಯಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅಗ್ರ ಸ್ಥಾನದಲ್ಲಿದ್ದು, ಒಬಾಮ ಒಟ್ಟು  182.7 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 12 (ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಮ್ ಸೇರಿದಂತೆ)ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com