ಪುಣೆ: ಬಟ್ಟೆ ಗೋದಾಮಿಗೆ ಬೆಂಕಿ, ಐವರು ಕಾರ್ಮಿಕರು ದುರ್ಮರಣ

ಪುಣೆ ಬಳಿಯ ಬಟ್ಟೆ ಗೋದಾಮುವೊಂದರಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಐವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ.
ಬೆಂಕಿ  ಚಿತ್ರ
ಬೆಂಕಿ ಚಿತ್ರ
Updated on: 

ಪುಣೆ: ಉರುಲಿ ದೇವಾಚಿ ಗ್ರಾಮದ  ಬಟ್ಟೆ ಗೋದಾಮುವೊಂದರಲ್ಲಿ  ಇಂದು ಮುಂಜಾನೆ  ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಐವರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು,ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಬೆಳಗಿನ ಜಾವ ಗೋದಾಮಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೊಠಡಿಯೊಂದರಲ್ಲಿ ಮಲಗಿದ್ದ ಐವರು ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಆದಾಗ್ಯೂ, ಬೆಂಕಿ ಯಾವ ಕಾರಣಕ್ಕೆ ಉಂಟಾಯಿತು ಎಂಬ  ಬಗ್ಗೆ ಕಾರಣ ತಿಳಿದುಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com