ಸಂಗ್ರಹ ಚಿತ್ರ
ದೇಶ
ಜಮ್ಮು ಮತ್ತು ಕಾಶ್ಮೀರ: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರನ ಹೊಡೆದುರುಳಿಸಿದ ಸೇನೆ
ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದ್ದು, ಶೋಪಿಯಾನ್ ನಲ್ಲಿ ಅಡಗಿ ಕುಳಿತಿದ್ದ ಉಗ್ರನೋರ್ವನನ್ನುಸೇನಾ ಕಾರ್ಯಾಚರಣೆಯಲ್ಲಿ ಸೈನಿಕರು ಹೊಡೆದುರುಳಿಸಿದ್ದಾರೆ.
ಶ್ರೀನಗರ: ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದ್ದು, ಶೋಪಿಯಾನ್ ನಲ್ಲಿ ಅಡಗಿ ಕುಳಿತಿದ್ದ ಉಗ್ರನೋರ್ವನನ್ನುಸೇನಾ ಕಾರ್ಯಾಚರಣೆಯಲ್ಲಿ ಸೈನಿಕರು ಹೊಡೆದುರುಳಿಸಿದ್ದಾರೆ.
ಕಾಶ್ಮೀರದ ಶೋಪಿಯಾನ್ ನಲ್ಲಿ ಉಗ್ರರು ಮನೆಯೊಂದರಲ್ಲಿ ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಯೋಧರು ಕೂಡಲೇ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಸೈನಿಕರ ಮೇಲೆ ಗುಂಡಿನ ಮಳೆಗರೆದಿದ್ದು, ಸೈನಿಕರು ಪ್ರತಿದಾಳಿ ನಡೆಸಿದಾಗ ಉಗ್ರನೋರ್ವ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ಘಟನಾ ಸ್ಥಳದಲ್ಸಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ಇದ್ದು, ಸೇನೆ ತೀವ್ರ ಶೋಧ ನಡೆಸುತ್ತಿದೆ. ಶೋಧ ಕಾರ್ಯಾಚರಣೆ ವೇಳೆ ಸೈನಿಕರಿಗೆ ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳು ಕಂಡುಬಂದಿದ್ದು, ಅವುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಇದೇ ತಿಂಗಳ ಆರಂಭದಲ್ಲಿ ಇಮಾಮ್ ಸಾಹೆಬ್ ಪ್ರದೇಶದಲ್ಲಿ ಸೇನೆ ಭಾರಿ ಪ್ರಮಾಣದ ಸೇನಾ ಕಾರ್ಯಾಚರಣೆ ನಡೆಸಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಲತೀಫ್ ಟೈಗರ್ ನನ್ನು ಕೊಂದು ಹಾಕಿತ್ತು. ಲತೀಫ್ ಟೈಗರ್ ಬುಹ್ರಾನ್ ವಾನಿ ಬ್ರಿಗೇಡ್ ನ ಸದಸ್ಯನಾಗಿದ್ದು, ಆತನೊಂದಿಗೆ ಸಂಘಟನೆಯ ಬಾಂಬ್ ಎಕ್ಸ್ ಪರ್ಟ್ ತಾರಿಖ್ ಮೌಲ್ವಿ ಮತ್ತು ಮತ್ತೋರ್ವ ಉಗ್ರಗಾಮಿಯನ್ನೂ ಸೇನೆ ಕೊಂದು ಹಾಕಿತ್ತು.

