ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ದೆಹಲಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು, ಕರಪತ್ರಗಳ ಹಂಚಿಕ ಮೂಲಕ ಅವರೇ ನಮ್ಮ ಮಾನಹಾನಿಗೆ ಯತ್ನಿಸಿದ್ದಾರೆ. ಮಾನಹಾನಿಯಾಗಿರುವುದು ನಮಗೆ. ಅಲ್ಲದೇ ನಮ್ಮ ವಿರುದ್ಧವೇ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ. ಹೀಗಾಗಿ ನಾವೇ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ಹೇಳಿದ್ದಾರೆ.