ರಾಜೀವ್ ಗಾಂಧಿ ಪುಣ್ಯ ಸ್ಮರಣೆ, ನೀವು ಯಾವಾಗಲೂ ನನ್ನ ಹೀರೋ- ಪ್ರಿಯಾಂಕಾ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳ ವೀರಭೂಮಿಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪುಷ್ಪ ನಮನ ಸಲ್ಲಿಸಿದರು.
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಅವರ ಸಮಾಧಿ ಸ್ಥಳ ವೀರಭೂಮಿಯಲ್ಲಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ,ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪುಷ್ಪ ನಮನ ಸಲ್ಲಿಸಿದರು.
ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ನೀವು ಯಾವಾಗಲೂ ನನ್ನ ಹಿರೋ ಎಂದಿದ್ದಾರೆ. ಅಲ್ಲದೇ, ಹರಿವಂಶ ರೈ ಬಚ್ಚನ್ ಅವರ ಅಗ್ನಿಪಥ್ ಕವಿತೆಯ ಸಾಲುಗಳೊಂದಿಗೆ ರಾಜೀವ್ ಗಾಂಧಿ ಜೊತೆಯಲ್ಲಿರುವ ಪೋಟೋವೊಂದನ್ನು ಹಂಚಿಕೊಂಡಿದ್ದಾರೆ.