ಸುಪ್ರೀಂಕೋರ್ಟ್
ದೇಶ
ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳ ಪ್ರಮಾಣ ವಚನ
ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು....
ನವದೆಹಲಿ: ಸುಪ್ರೀಂಕೋರ್ಟ್‌ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.
ನೂತನ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಸೂರ್ಯಕಾಂತ್, ಅನಿರುದ್ಧ ಬೋಸ್, ಎ ಎಸ್ ಬೋಪಣ್ಣ ಅವರಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣ ವಚನ ಬೋಧಿಸಿದರು. ಸುಪ್ರೀಂಕೋರ್ಟ್‌ನ ಇತರ ಹಿರಿಯ ನ್ಯಾಯಮೂರ್ತಿಗಳು ಉಪಸ್ಥಿತರಿದ್ದರು.
ಇವರ ಸೇರ್ಪಡೆಯೊಂದಿಗೆ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. 2018 ಅಕ್ಟೋಬರ್ ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ರಂಜಯ್ ಗೊಗೊಯ್ ಅವರು ಅಧಿಕಾರ ವಹಿಸಿಕೊಂಡ ಬಳಿಕ 10 ನ್ಯಾಯಮೂರ್ತಿಗಳ ಹುದ್ದೆಯನ್ನು ಭರ್ತಿ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ