ಕಳೆದ ಬಾರಿ ಸಾರ್ಕ್ ರಾಷ್ಟ್ರಗಳ ನಾಯಕರನ್ನು ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿತ್ತು. ಈ ಬಾರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನಂತಹ ವಿಶ್ವದ ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಸರ್ಕಾರ ತನ್ನ ಶಕ್ತಿ ಪ್ರದರ್ಶನ ಮಾಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.