ಚೆನ್ನೈ: ಪಳನಿಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಡಿಎಂಕೆ ಮುಖಂಡ ದಯಾನಿಧಿ ಮಾರನ್ ಆಗ್ರಹ
ಚೆನ್ನೈ : ವಿಧಾನಸಭೆ ಉಪ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೂ ಅಧಿಕಾರ ಪಡೆಯುವಲ್ಲಿ ವಿಫಲವಾದ ಡಿಎಂಕೆ ನೇತೃತ್ವದ ಮೈತ್ರಿಕೂಟ ಲೋಕಸಭಾ ಚುನಾವಣೆಯಲ್ಲಿ 38 ಸ್ಥಾನಗಳ ಪೈಕಿ 37ರಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ.
ಡಿಎಂಕೆ 23 ಸ್ಥಾನಗಳಲ್ಲಿ ಗೆಲುವಿನ ನಗೆ ಬೀರಿದ್ದರೆ, ಡಿಎಂಕೆ ಮಿತ್ರ ಪಕ್ಷಗಳಾದ ಕಾಂಗ್ರೆಸ್ ಎಂಟು, ಸಿಪಿಎಂ ಮತ್ತು ಸಿಪಿಐ ತಲಾ 2 ಹಾಗೂ ಐಯುಎಂಎಲ್ ಮತ್ತು ವಿಸಿಕೆ ತಲಾ ಒಂದು ಸ್ಥಾನ ಪಡೆಯುವಲ್ಲಿ ಪಡೆಯುವಲ್ಲಿ ಯಶಸ್ವಿಯಾಗಿದೆ. ವಿರೋಧ ಪಕ್ಷ ಎಐಎಡಿಎಂಕೆ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ .
ತಮಿಳುನಾಡಿನಲ್ಲಿ ಒಟ್ಟು 39 ಲೋಕಸಭಾ ಕ್ಷೇತ್ರಗಳಿವೆ. ಆದರೆ, ವೆಲ್ಲೂರು ಕ್ಷೇತ್ರದಲ್ಲಿ ಅಪಾರ ಪ್ರಮಾಣದ ಅಕ್ರಮ ಹಣ ಪತ್ತೆಯಾಗಿದ್ದರಿಂದ ಆಯೋಗವು ಇಲ್ಲಿ ಚುನಾವಣೆಯನ್ನು ರದ್ದುಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊತ್ತುಕೊಂಡು ಮುಖ್ಯಮಂತ್ರಿ ಪಳನಿಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಚೆನ್ನೈ ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಡಿಎಂಕೆ ಮುಖಂಡ ದಯಾನಿಧಿ ಮಾರನ್ ಆಗ್ರಹಿಸಿದ್ದಾರೆ.
ಹಣ ಬಲದಿಂದ ಕೇವಲ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿರುವ ಪಳನಿಸ್ವಾಮಿ ಅವರಿಗೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ದಯಾನಿಧಿ ಮಾರನ್ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ