ಸಂಸತ್ ಭವನ
ಸಂಸತ್ ಭವನ

17ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 6 ರಿಂದ 15ರ ವರೆಗೆ ನಡೆಯುವ ಸಾಧ್ಯತೆ

17ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 6ರಿಂದ ಆರಂಭವಾಗಿ ಜೂನ್ 15ರ ವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಭಾನುವಾರ ಮೂಲಗಳು ತಿಳಿಸಿವೆ.
Published on
ನವದೆಹಲಿ: 17ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 6ರಿಂದ ಆರಂಭವಾಗಿ ಜೂನ್ 15ರ ವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಭಾನುವಾರ ಮೂಲಗಳು ತಿಳಿಸಿವೆ.
ಇತ್ತೀಚಿಗಷ್ಟೇ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. 
ಪ್ರಧಾನಿ ಮೋದಿ ಮೇ 31ರಂದು ಮೊದಲ ಸಂಪುಟ ಸಭೆ ನಡೆಸಲಿದ್ದು, ಅಂದೇ 17ನೇ ಲೋಕಸಭೆಯ ಮೊದಲ ಅಧಿವೇಶನದ ದಿನಾಂಕ ಅಂತಿಮಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 6 ರಿಂದ ಆರಂಭವಾಗುವ ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ತನ್ನ ಬಹುಮತ ಸಾಬೀತುಪಡಿಸಲಿದ್ದು, ಬಳಿಕ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com