ಆಂಧ್ರದಲ್ಲಿ ಸರ್ಕಾರ ರಚಿಸುವಂತೆ ಜಗನ್ ಮೋಹನ್ ರೆಡ್ಡಿಗೆ ರಾಜ್ಯಪಾಲರಿಂದ ಆಹ್ವಾನ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ(ವೈಎಸ್‌ಆರ್‌ಸಿ) ಅಧ್ಯಕ್ಷ ....
ವೈಎಸ್ ಜಗನ್ ಮೋಹನ್ ರೆಡ್ಡಿ - ನರಸಿಂಹನ್
ವೈಎಸ್ ಜಗನ್ ಮೋಹನ್ ರೆಡ್ಡಿ - ನರಸಿಂಹನ್
ಹೈದರಾಬಾದ್: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ(ವೈಎಸ್‌ಆರ್‌ಸಿ) ಅಧ್ಯಕ್ಷ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಸರ್ಕಾರ ರಚಿಸುವಂತೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಪಾಲ ಇ.ಎಸ್.ಎಲ್ ನರಸಿಂಹನ್ ಅವರು ಶನಿವಾರ ಆಹ್ವಾನ ನೀಡಿದ್ದಾರೆ.
ರಾಜ್ಯಪಾಲರ ಆಹ್ವಾನದ ಹಿನ್ನೆಲೆಯಲ್ಲಿ ಜಗನ್ ಮೋಹನ್ ರೆಡ್ಡಿ ಅವರು ಇಂದು ರಾತ್ರಿ ರಾಜಭವನಕ್ಕೆ ತೆರಳಿ ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.
ಇದಕ್ಕು ಮುನ್ನ ವೈಎಸ್ ಆರ್ ಕಾಂಗ್ರೆಸ್ ನಾಯಕ ಬೊಸ್ತ ಸತ್ಯನಾರಾಯಣ ಮತ್ತು ಇತರೆ ಚುನಾಯಿತ ಸದಸ್ಯರು ರಾಜಭವನಕ್ಕೆ ತೆರಳಿ, ಪಕ್ಷದ ನೂತನ ಶಾಸಕರು ಜಗನ್ ಅವರನ್ನು ವೈಎಸ್ ಆರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ ನಿರ್ಣಯವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು. ಅಲ್ಲದೆ ಸರ್ಕಾರ ರಚನೆಗೆ ಆಹ್ವಾನಿಸುವಂತೆ ಮನವಿ ಮಾಡಿದ್ದರು.
ರಾಜ್ಯಪಾಲರ ಭೇಟಿಯ ಬಳಿಕ ಜಗನ್ ಮೋಹನ್ ರೆಡ್ಡಿ ಅವರು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ನಿವಾಸಕ್ಕೆ ತೆರಳಿ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದರು.
ಜಗನ್ ಮೋಹನ್ ರೆಡ್ಡಿ ಅವರು ಮೇ 30ರಂದು ವಿಜಯವಾಡದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com