ಎನ್ ಡಿಎಗೆ ಚಾರಿತ್ರಿಕ ಗೆಲುವು- ಅಡ್ವಾಣಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿರುವುದಕ್ಕೆ ಹಿರಿಯ ಬಿಜೆಪಿ ಮುಖಂಡ ಎಲ್. ಕೆ. ಅಡ್ವಾಣಿ ಸಂತಸ ವ್ಯಕ್ತಪಡಿಸಿದ್ದು, ಇದೊಂದು ಚಾರಿತ್ರಿಕ ಗೆಲುವಾಗಿದೆ ಎಂದು ಹೇಳಿದ್ದಾರೆ.
ಅಡ್ವಾಣಿ
ಅಡ್ವಾಣಿ
Updated on

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿರುವುದಕ್ಕೆ ಹಿರಿಯ ಬಿಜೆಪಿ ಮುಖಂಡ ಎಲ್. ಕೆ. ಅಡ್ವಾಣಿ ಸಂತಸ ವ್ಯಕ್ತಪಡಿಸಿದ್ದು,  ಇದೊಂದು ಚಾರಿತ್ರಿಕ ಗೆಲುವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯನ್ನು ಎನ್ ಡಿಎ ನಾಯಕನಾಗಿ ಆಯ್ಕೆ ಮಾಡಿದ ಸಂಸದೀಯ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್. ಕೆ. ಅಡ್ವಾಣಿ, ಚುನಾವಣೆಗಳಲ್ಲಿ ಭಾಗವಹಿಸಿದ ಎಲ್ಲರೂ ಫಲಿತಾಂಶಗಳಿಂದ "ಸಂತೋಷಪಡುತ್ತಿದ್ದಾರೆ ಎಂದರು.

ನಂತರ ಸಂಸತ್ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಐತಿಹಾಸಿಕ ಜನರ ತೀರ್ಪಿನಿಂದ ಸಂತೋಷವಾಗಿದ್ದೇನೆ. ಇಲ್ಲಿಗೆ ಬಂದಿರುವ ಪ್ರತಿಯೊಬ್ಬ ಎನ್ ಡಿಎ ನಾಯಕರು ಸಂತೋಷದಿಂದ ಇರುವುದಾಗಿ ತಿಳಿಸಿದರು.

ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಅಡ್ವಾಣಿ ಮನೆಗೆ ತೆರಳಿದ್ದ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಅಡ್ವಾಣಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದರು.
ಸಾವ್ರರ್ತಿಕ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com