ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಮ್ ಸ್ಟೆಕ್ ನಾಯಕರಿಗೆ ಆಹ್ವಾನ

ಮೇ 30 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಮ್ ಸ್ಟೆಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಾಗಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಬಿಮ್ ಸ್ಟೆಕ್ ರಾಷ್ಟ್ರಗಳ ನಾಯಕರು
ಬಿಮ್ ಸ್ಟೆಕ್ ರಾಷ್ಟ್ರಗಳ ನಾಯಕರು

ನವದೆಹಲಿ: ಮೇ 30 ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ  ಬಿಮ್ ಸ್ಟೆಕ್ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸಲಾಗಿದೆ  ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಮೇ 30ರಂದು ರಾಷ್ಟ್ರಪತಿ ಭವನದಲ್ಲಿ ಸಂಜೆ 7 ಗಂಟೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನೂತನ ಸಂಪುಟದ ಸಚಿವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರದ ಗೌಪ್ಯತೆ ಬೋಧಿಸಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ಹೇಳಲಾಗಿದೆ.

ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್, ಶ್ರೀಲಂಕಾ, ಥೈಲ್ಯಾಂಡ್ , ನೇಪಾಳ ಮತ್ತು ಭೂತಾನ್  ಬಿಮ್ ಸ್ಟೆಕ್ ರಾಷ್ಟ್ರಗಳಾಗಿವೆ.ದಕ್ಷಿಣ ಹಾಗೂ ಆಗ್ನೇಯ ಏಷ್ಯಾ ರಾಷ್ಟ್ರಗಳ ನಡುವಣ ಸೇತುವೆಯಾಗಿ ಸೇವೆ ಸಲ್ಲಿಸುವ ಉದ್ದೇಶದೊಂದಿಗೆ 1997 ರ ಬ್ಯಾಂಕಾಂಕ್  ಒಪ್ಪಂದಂತೆ  ಬಿಮ್ ಸ್ಟೆಕ್ ರಾಷ್ಟ್ರಗಳ ಒಕ್ಕೂಟವನ್ನು ರಚಿಸಲಾಗಿದೆ.

ಬಿಮ್ ಸ್ಟೆಕ್ ರಾಷ್ಟ್ರಗಳ ಮುಖ್ಯಸ್ಥರ ಜೊತೆಗೆ ಕಿರ್ಗಿಜ್ ರಿಪಬ್ಲಿಕ್ ಅಧ್ಯಕ್ಷರು ಹಾಗೂ ಪ್ರವಾಸಿ ಭಾರತೀಯ ದಿವಸ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ   ಮಾರಿಷಸ್  ಪ್ರಧಾನ ಮಂತ್ರಿ ಅವರನ್ನು ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಾಗುತ್ತಿದೆ ಎಂಬುದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com