ಪಂಡಿತ್ ಜವಹರಲಾಲ್ ನೆಹರೂ ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸಿದ ರಾಹುಲ್ ಗಾಂಧಿ
ದೇಶ
ಹಲವು ಪ್ರಜಾಸತ್ತಾತ್ಮಕ ರಾಷ್ಟ್ರಗಳು ಸರ್ವಾಧಿಕಾರದಿಂದಾಗಿ ಕ್ಷೀಣಿಸಿವೆ: ರಾಹುಲ್ ಗಾಂಧಿ
ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ 55ನೇ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಅವರಿಗೆ ಗೌರವ ಸೂಚಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...
ಬೆಂಗಳೂರು: ಸೋಮವಾರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ 55ನೇ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಅವರಿಗೆ ಗೌರವ ಸೂಚಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಭಾರತ ಶೀಘ್ರದಲ್ಲೇ ಸರ್ವಾಧಿಕಾರಿ ಆಡಳಿತಕ್ಕೆ ಒಳಗಾಗಿ ಕ್ಷೀಣಿಸುವ ಸಾಧ್ಯತೆ ಇದೆ ಎಂದು ಸೂಚ್ಯವಾಗಿ ಬರೆದಿದ್ದಾರೆ.
ಹಲವು ಪ್ರಜಾಸತ್ತಾತ್ಮಕ ರಾಷ್ಟ್ರಗಳು ಸರ್ವಾಧಿಕಾರದಿಂದಾಗಿ ಕ್ಷೀಣಿಸಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
70 ವರ್ಷಗಳಿಂದ ಭಾರತದಲ್ಲಿ ಪ್ರಜಾಪ್ರಭುತ್ವ ಉಳಿದಿರಲು ಅಂದು ಜವಾಹರಲಾಲ್ ನೆಹರೂ ನೀಡಿದ ಕೊಡುಗೆಗಳು ಸ್ಮರಣೀಯ. ನಮ್ಮ ರಾಷ್ಟ್ರವನ್ನು ಶಕ್ತಿಯುತವಾಗಿ ಕಟ್ಟಲು ಅವರು ಸಾಕಷ್ಟು ಪರಿಶ್ರಮ ಹಾಕಿದ್ದಾರೆ. ಆಧುನಿಕ ಸಂಸ್ಥೆಗಳನ್ನು ನಿರ್ಮಿಸಿ ರಾಷ್ಟ್ರ ಕಟ್ಟಿದ್ದಾರೆ. ಅವರ ಕೊಡುಗೆಗಳನ್ನು 55ನೇ ಪುಣ್ಯ ಸ್ಮರಣೆಯ ದಿನವಾದ ಇಂದು ನಾವೆಲ್ಲರೂ ನೆನಪಿಸಿಕೊಳ್ಳಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Many democratic nations as young as India, soon degenerated into dictatorships.
On his death anniversary, let us remember Jawaharlal Nehru Ji’s contribution in building strong, independent, modern institutions, that have helped democracy survive in India for over 70 years


