ಶಾರದಾ ಚಿಟ್ ಫಂಡ್ ಹಗರಣ: ಎಡಿಜಿ ರಾಜೀವ್ ಕುಮಾರ್ ಗೆ 'ದಾಖಲೆ' ಕಳುಹಿಸಿದ ಸಿಬಿಐ

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗಲು ವಿಫಲರಾದ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ...
ರಾಜೀವ್ ಕುಮಾರ್
ರಾಜೀವ್ ಕುಮಾರ್
ಕೋಲ್ಕತಾ: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆಗೆ ಹಾಜರಾಗಲು ವಿಫಲರಾದ ಕೋಲ್ಕತಾ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಸಿಬಿಐ ಮಂಗಳವಾರ ಪ್ರಕರಣಕ್ಕೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ.
ಸಿಬಿಐ ಅಧಿಕಾರಿಗಳು ಸದ್ಯ ಸಿಐಡಿ ಎಡಿಜಿಯಾಗಿರುವ ರಾಜೀವ್ ಕುಮಾರ್ ಅವರ ಕಚೇರಿಗೆ ಇಂದು ಕೆಲವು ದಾಖಲೆಗಳನ್ನು ತಲುಪಿಸಿದ್ದಾರೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ವಿಚಾರಣೆಗೆ ಹಾಜರಾಗದ ರಾಜೀವ್ ಕುಮಾರ್ ಅವರಿಗೆ ಮತ್ತೊಂದು ಸಮನ್ಸ್ ನೀಡಲಾಗಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಅಧಿಕಾರಿಗಳು, ಇದು ಸಮನ್ಸ್ ಅಲ್ಲ. ಪ್ರಕರಣದ ತನಿಖೆಗೆ ಸಂಬಂಧಿಸಿದ ಕೆಲ ದಾಖಲೆಗಳು ಎಂದಷ್ಟೇ ಹೇಳಿದ್ದಾರೆ.
ರಾಜೀವ್ ಕುಮಾರ್ ಅವರು ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ವಿಚಾರಣೆ ಹಾಜರಾಗಲು ಹೆಚ್ಚಿನ ಕಾಲವಕಾಶ ಕೇಳಿದ್ದಾರೆ.
ಬಹುಕೋಟಿ ಶಾರದಾ ಚಿಟ್‌ಫಂಡ್‌ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಹಿರಿಯ ಐಪಿಎಸ್‌ ಅಧಿಕಾರಿ ರಾಜೀವ್‌ ಕುಮಾರ್‌ ಅವರು ತಮ್ಮನ್ನು ಬಂಧಿಸದಂತೆ ಸುಪ್ರೀಂ ನೀಡಿದ್ದ 'ರಕ್ಷಣಾ ಅವಧಿ' ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿತ್ತು. ಹೀಗಾಗಿ ಯಾವುದೇ ಕ್ಷಣದಲ್ಲಿ ಸಿಬಿಐ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com