ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವದ ಅಡಿ, ಮೇಲಾಗಿ ಅಮಿತ್ ಶಾ ಅವರು ಮೂರು ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹೊಸ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಅಮಿತ್ ಶಾ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಪ್ರಮುಖವಾಗಿ ಬಿಜೆಪಿ ಹಿರಿಯ ನಾಯಕರಾದ ಜೆ ಪಿ ನಡ್ಡಾ, ಧರ್ಮೇಂದ್ರ ಪ್ರಧಾನ್, ನಿತಿನ್ ಗಡ್ಕರಿ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.