ಮಮತಾ ಅಷ್ಟೇ ಅಲ್ಲ: ಪಂಜಾಬ್ ನ ಸಿಎಂ ಕ್ಯಾ. ಅಮರಿಂದರ್ ಸಿಂಗ್ ಕೂಡ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು
ಮಮತಾ ಅಷ್ಟೇ ಅಲ್ಲ: ಪಂಜಾಬ್ ನ ಸಿಎಂ ಕ್ಯಾ. ಅಮರಿಂದರ್ ಸಿಂಗ್ ಕೂಡ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು

ಮಮತಾ ಅಷ್ಟೇ ಅಲ್ಲ, ಸಿಎಂ ಕ್ಯಾ. ಅಮರಿಂದರ್ ಸಿಂಗ್ ಕೂಡ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಗೈರು

ಪ್ರಧಾನಿ ನರೇಂದ್ರ ಮೋದಿ ಮೇ.30 ರ ಸಂಜೆ 2 ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ವಿಪಕ್ಷ ನಾಯಕರಿಗೆ, ಸೈದ್ಧಾಂತಿಕ ಕಾರಣಗಳಿಂದಾಗಿ ಮೃತಪಟ್ಟಿದ್ದ ಪಶ್ಚಿಮ ಬಂಗಾಳದ ಕಾರ್ಯಕರ್ತರ ಕುಟುಂಬ
Published on
ಪಂಜಾಬ್: ಪ್ರಧಾನಿ ನರೇಂದ್ರ ಮೋದಿ ಮೇ.30 ರ ಸಂಜೆ 2 ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ವಿಪಕ್ಷ ನಾಯಕರಿಗೆ, ಸೈದ್ಧಾಂತಿಕ ಕಾರಣಗಳಿಂದಾಗಿ ಮೃತಪಟ್ಟಿದ್ದ ಪಶ್ಚಿಮ ಬಂಗಾಳದ ಕಾರ್ಯಕರ್ತರ ಕುಟುಂಬ ಸದಸ್ಯರಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನಿಸಲಾಗಿದೆ. 
ಈ ನಡುವೆ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಮಮತಾ ಬ್ಯಾನರ್ಜಿ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ. ಇತ್ತ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಹ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂಬ ವರದಿ ಪ್ರಕಟವಾಗಿದೆ. 
ಆದರೆ ಕಾಂಗ್ರೆಸ್ ನ ನಾಯಕರಾದ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com