ಸಂಗ್ರಹ ಚಿತ್ರ
ದೇಶ
ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಅಟ್ಟಹಾಸ: ಬಿಜೆಪಿ ನಾಯಕನ ವಾಹನಕ್ಕೆ ಬೆಂಕಿ
ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಕುಲ್ಗಾಂವ್'ನ ಬೋನಿಗಮ್ ಗ್ರಾಮದಲ್ಲಿ ಬಿಜೆಪಿ ನಾಯಕನ ವಾಹನ ಸೇರಿದಂತೆ ಒಟ್ಟು ಮೂರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಶ್ರೀನಗರ: ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಕುಲ್ಗಾಂವ್'ನ ಬೋನಿಗಮ್ ಗ್ರಾಮದಲ್ಲಿ ಬಿಜೆಪಿ ನಾಯಕನ ವಾಹನ ಸೇರಿದಂತೆ ಒಟ್ಟು ಮೂರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಕುಲ್ಗಾಂವ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅದಿಲ್ ಅಹಮದ್ ಗನಾಯ್ ಅವರಿಗೆ ಸೇರಿದ ವಾಹನಕ್ಕೆ ಉಗ್ರರು ಬೆಂಕಿ ಹಚ್ಚಿದ್ದಾರೆಂದು ತಿಳಿದುಬಂದಿದೆ.
ಮನೆಯ ಹೊರಾಂಗಣದಲ್ಲಿ ಪಾರ್ಕಿಂಗ್ ಮಾಡಿದ್ದ ಸಂದರ್ಭದಲ್ಲಿ ಇಂದು ಬೆಳಿಗಿನ ಜಾವ 3 ಗಂಟೆ ಸುಮಾರಿಗೆ ಉಗ್ರರು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಬಿಜೆಪಿ ನಾಯಕ ಮನೆಯಲ್ಲಿರಲಿಲ್ಲ ಎಂದು ವರದಿಗಳು ತಿಳಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ