ಪೋರ್ನ್ ನೋಡೋ ಚಟ: 6 ವರ್ಷದ ಮಗುವನ್ನು ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆಗೈದ 13ರ ಬಾಲಕ!

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುವ ಚಟ ಬೆಳೆಸಿಕೊಂಡಿದ್ದ 13ರ ಬಾಲಕನೋರ್ವ 6 ವರ್ಷದ ಮಗುವನ್ನು ಅತ್ಯಾಚರಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿದ್ದಾನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮುಂಬೈ: ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುವ ಚಟ ಬೆಳೆಸಿಕೊಂಡಿದ್ದ 13ರ ಬಾಲಕನೋರ್ವ 6 ವರ್ಷದ ಮಗುವನ್ನು ಅತ್ಯಾಚರಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿದ್ದಾನೆ.

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಈ ಹೀನ ಕೃತ್ಯ ನಡೆದಿದೆ. ಬಾಲಕಿ ಶವ ಪತ್ತೆಯಾದ ಎರಡು ದಿನಗಳ ಬಳಿಕ ಬಾಲಕ ತನ್ನ ಕೃತ್ಯದ ಬಗ್ಗೆ ತಪ್ಪೋಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬಾಲಕ ವಿಚಾರಣೆ ವೇಳೆ ತಾನು ಪೋರ್ನ್ ವಿಡಿಯೋಗಳನ್ನು ನೋಡುವ ಚಟ ಬೆಳೆಸಿಕೊಂಡಿದ್ದಾಗಿ ಹೇಳಿದ್ದಾನೆ. ಇದೇ ಮಗುವಿನ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಪ್ರಚೋದನೆ ನೀಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

ಕಳೆದ ಸೋಮವಾರ 6 ವರ್ಷದ ಮಗು ಸಂಬಂಧಿಕರ ಜೊತೆ ಪಟಾಕಿ ಸಿಡಿಸುವಾಗ ನಾಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರಿಗೆ ಪೈಪ್ ಲೈನ್ ಬಳಿ ಬಾಲಕಿ ಶವ ಪತ್ತೆಯಾಗಿತ್ತು. ನಂತರ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com