ಜಮ್ಮು, ಕಾಶ್ಮೀರ ಲೆ. ಗವರ್ನರ್ ಪ್ರಮಾಣವಚನಕ್ಕೆ ಹಾಜರಾಗಿದ್ದ ಪಿಡಿಪಿ ಸಂಸದ ನಾಝಿರ್ ಅಹ್ಮದ್ ಉಚ್ಚಾಟನೆ

ನೂತನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಪಿಡಿಪಿ ರಾಜ್ಯಸಭಾ ಸದಸ್ಯ ನಾಝಿರ್...
ನಾಝಿರ್ ಅಹ್ಮದ್ ಲಾವಯ್
ನಾಝಿರ್ ಅಹ್ಮದ್ ಲಾವಯ್

ಶ್ರೀನಗರ: ನೂತನ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಪಿಡಿಪಿ ರಾಜ್ಯಸಭಾ ಸದಸ್ಯ ನಾಝಿರ್ ಅಹ್ಮದ್ ಲಾವಯ್ ಅವರನ್ನು ಶುಕ್ರವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಾಜ್ಯಸಭಾ ಸದಸ್ಯ ನಾಝಿರ್ ಅಹ್ಮದ್ ಲಾವಯ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಪಿಡಿಪಿ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಾವಯ್ ಅವರು ಪಕ್ಷದ ನಿಲುವಿಗೆ ವಿರುದ್ಧವಾಗಿ ನಿನ್ನೆ ಶ್ರೀನಗರದಲ್ಲಿ ನಡೆದ ಮುರ್ಮು ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com