ಫಲಿತಾಂಶ ಬಂದು 12 ದಿನಗಳಾಯ್ತು, ಮುಂದುವರಿದಿದೆ ಬಿಜೆಪಿ-ಶಿವಸೇನೆ ಭಿನ್ನಮತ 

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ 12 ದಿನಗಳಾಗಿದೆ. ಭಾರತೀಯ ಜನತಾ ಪಾರ್ಟಿ 105 ಸ್ಥಾನಗಳಲ್ಲಿ ಗೆದ್ದರೆ ಶಿವಸೇನೆ 56, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮತ್ತು ಕಾಂಗ್ರೆಸ್ ಕ್ರಮವಾಗಿ 54 ಮತ್ತು 44 ಸ್ಥಾನಗಳನ್ನು ಗೆದ್ದುಕೊಂಡಿವೆ.
ಉದ್ಧವ್ ಠಾಕ್ರೆ-ದೇವೇಂದ್ರ ಫಡ್ನವಿಸ್
ಉದ್ಧವ್ ಠಾಕ್ರೆ-ದೇವೇಂದ್ರ ಫಡ್ನವಿಸ್
Updated on: 

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ 12 ದಿನಗಳಾಗಿದೆ. ಭಾರತೀಯ ಜನತಾ ಪಾರ್ಟಿ 105 ಸ್ಥಾನಗಳಲ್ಲಿ ಗೆದ್ದರೆ ಶಿವಸೇನೆ 56, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮತ್ತು ಕಾಂಗ್ರೆಸ್ ಕ್ರಮವಾಗಿ 54 ಮತ್ತು 44 ಸ್ಥಾನಗಳನ್ನು ಗೆದ್ದುಕೊಂಡಿವೆ.


ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಪಕ್ಷಗಳ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಯಾವುದೇ ಪಕ್ಷ ಕೂಡ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ಬಗ್ಗೆ ತೀರ್ಮಾನಕ್ಕೆ ಇದುವರೆಗೆ ಬಂದಿಲ್ಲ.


ಮುಖ್ಯಮಂತ್ರಿ ಹುದ್ದೆ ಕುರಿತು ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಒಳಜಗಳ, ಭಿನ್ನಾಭಿಪ್ರಾಯಗಳು ನಡೆಯುತ್ತಿದೆ. ಹೀಗಾಗಿ ಮೈತ್ರಿಯಾಗಿ ಚುನಾವಣೆಯನ್ನು ಎದುರಿಸಿದ್ದ ಪಕ್ಷಗಳು ಈಗ ಒಟ್ಟಿಗೆ ಸರ್ಕಾರ ರಚಿಸಲು ಸಹಮತಕ್ಕೆ ಬಂದಿಲ್ಲ.ಮಹಾರಾಷ್ಟ್ರದಲ್ಲಿನ ಅಧಿಕಾರದ ಜಗಳ ಹೈಕಮಾಂಡ್ ಅಂಗಳಕ್ಕೆ ತಲುಪಿದೆ.


 ಅತಿ ಉನ್ನತ ಮಟ್ಟದ ಸಭೆ ದೆಹಲಿ ಮತ್ತು ಮುಂಬೈಯಲ್ಲಿ ನಡೆಯುತ್ತಲೇ ಇದೆ. ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೂಡ ಸರ್ಕಾರ ರಚನೆಯಲ್ಲಿ ಸಹಮತಕ್ಕೆ ಬಂದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com