ಕರ್ತಾರ್ಪುರ ಕಾರಿಡಾರ್ ಉದ್ಘಾಟನೆ: ಶ್ರೀ ಶ್ರೀ ರವಿಶಂಕರ್ ಗುರೂಜಿ ಆಹ್ವಾನಿಸಿದ ಪಾಕಿಸ್ತಾನ

ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರನ್ನು ಪಾಕಿಸ್ತಾನ ಆಹ್ವಾನಿಸಿದೆ ಎಂದು ತಿಳಿದುಬಂದಿದೆ. 
ರವಿಶಂಕರ್ ಗುರೂಜಿ
ರವಿಶಂಕರ್ ಗುರೂಜಿ

ನವದೆಹಲಿ: ಕರ್ತಾರ್ಪುರ ಕಾರಿಡಾರ್ ಉದ್ಘಾಟನೆಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿಯವರನ್ನು ಪಾಕಿಸ್ತಾನ ಆಹ್ವಾನಿಸಿದೆ ಎಂದು ತಿಳಿದುಬಂದಿದೆ. 

ಪಂಜಾಬ್ ರಾಜ್ಯದ ಗುರುದಾಸ್ ಪುರ ಜಿಲ್ಲೆಯಿಂದ ಪಾಕಿಸ್ತಾನದಲ್ಲಿರುವ ಕರ್ತಾರ್ಪುರ ದರ್ಬಾರ್ ಸಾಹೀಬ್'ಗೆ ಹೆದ್ದಾರಿ ನಿರ್ಮಿಸಲಾಗಿದ್ದು, ಅದರ ಉದ್ಘಾಟನೆಗೆ ಗುರೂಜಿಯವರಿಗೆ ಆಹ್ವಾನ ನೀಡಲಾಗಿದೆ. 

ಸಿಖ್ ಪಂಥದ ಸ್ಥಾಪಕ ಗುರುನಾನಕ್ ಅವರು ನಿರ್ಮಿಸಿದ್ದ ಪಾಕಿಸ್ತಾನದ ಕರ್ತಾರ್ಪುರದಲ್ಲಿರುವ ಗುರುದ್ವಾರಕ್ಕೆ ಭಾರತೀಯರು ಇನ್ನು ನೇರವಾಗಿ ಪ್ರವೇಶಿಸಲು ಸಾಧ್ಯ. ಭಾರತ ಹಾಗೂ ಪಾಕಿಸ್ತಾನ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕರ್ತಾರ್ಪುರ ಕಾರಿಡಾರ್ ಅನ್ನು ನ.9ರಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಉದ್ಘಾಟಿಸಲಿದ್ದಾರೆ. 

ಗುರುನಾನಕ್ ಅವರ 550ನೇ ಜನ್ಮದಿನಕ್ಕೂ ಮುನ್ನ ಕಾರಿಡಾರ್ ಬಳಕೆಗೆ ಲಭ್ಯವಾಗಲಿದ್ದು, ಸಿಖ್ ಸಮುದಾಯದ ದಶಕಗಳ ಬೇಡಿಕೆ ಕಾರ್ಯರೂಪಕ್ಕೆ ಬರುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com