ಸಂವಿಧಾನದ ಹಕ್ಕಿನ ಉಲ್ಲಂಘನೆ : ನ್ಯಾ ಅಶೋಕ್ ಗಂಗೂಲಿ ಅಸಮಾಧಾನ
ದೇಶ
ಅಯೋಧ್ಯೆ ತೀರ್ಪು: ಸಂವಿಧಾನದ ಹಕ್ಕಿನ ಉಲ್ಲಂಘನೆ : ನ್ಯಾ ಅಶೋಕ್ ಗಂಗೂಲಿ ಅಸಮಾಧಾನ
ಅಯೋಧ್ಯೆಯ ರಾಮ ಜನ್ಮಭೂಮಿ ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನ ಸಂವಿಧಾನಪೀಠ ನೀಡಿರುವ ಸರ್ವಸಮ್ಮತ ತೀರ್ಪು ದಿಗ್ಭ್ರಮೆ ಉಂಟು ಮಾಡಿದೆ ಎಂದು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಶೋಕ್ ಕುಮಾರ್ ಗಂಗೂಲಿ ಹೇಳಿದ್ದಾರೆ.
ಕೋಲ್ಕತ್ತಾ: ಅಯೋಧ್ಯೆಯ ರಾಮ ಜನ್ಮಭೂಮಿ ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನ ಸಂವಿಧಾನಪೀಠ ನೀಡಿರುವ ಸರ್ವಸಮ್ಮತ ತೀರ್ಪು ದಿಗ್ಭ್ರಮೆ ಉಂಟು ಮಾಡಿದೆ ಎಂದು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಶೋಕ್ ಕುಮಾರ್ ಗಂಗೂಲಿ ಹೇಳಿದ್ದಾರೆ.
ವಿವಾದಿತ 2.77 ಎಕರೆ ಜಮೀನಿನ ಮಾಲೀಕತ್ವ ರಾಮ ಲಲ್ಲಾ ಗೆ ಸೇರಬೇಕು, ಅಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿರುವುದು ಹಲವು ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ ಎಂದು ತೀರ್ಪಿನ ಬಳಿಕೆ ಪ್ರತಿಕ್ರಿಯೆ ನೀಡಿದ್ದಾರೆ.


