2024ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ: ವಿಹೆಚ್'ಪಿ

ರಾಮ ಮಂದಿರ ಪರ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಇಂದೋರ್: ರಾಮ ಮಂದಿರ ಪರ ಸುಪ್ರೀಂಕೋರ್ಟ್ ನೀಡಿದ ತೀರ್ಪನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡುವುದಾಗಿ ಹೇಳಿದೆ. 

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವ ಹಿಂದೂ ಪರಿಷತ್'ನ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷ ಸದಾಶಿವ್ ಕೋಕ್ ಅವರು, ಸಿಗದಿತ ಸ್ಥಳದಲ್ಲಿ ರಾಮ ಜನ್ಮಭೂಮಿ ನ್ಯಾಸ್ ತಯಾರಿಸಿದ ನೀಲ ನಕಾಶೆಯಂತೆ 2024ರೊಳಗೆ ರಾಮ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ. 

ಈ ತೀರ್ಪು ಯಾರ ಸೋಲು ಗೆಲುವಿನ ಪ್ರಶ್ನೆಯಲ್ಲ. ಸಮತೋಲಿತ ತೀರ್ಪು ನೀಡುವ ಮೂಲಕ ಸುಪ್ರೀಂಕೋರ್ಟ್ ಶತಮಾನಗಳ ವ್ಯಾಜ್ಯವನ್ನು ಬಗೆಹರಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಕೇಂದ್ರ ಸರ್ಕಾರ ರಚಿಸುವ ಸಮಿತಿಯ ನೇತೃತ್ವದಲ್ಲಿ ಮಂದಿರ ನಿರ್ಮಾಣ ಮಾಡಲಾಗುವುದು. ಈಗಾಗಲೇ ಎರಡು ಮಹಡಿಗಳ ಕಲ್ಲು ಕೆತ್ತನೆ ಪೂರ್ಣಗೊಂಡಿದ್ದು, 2024ರೊಳಗೆ ಮಂದಿರ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com