ಮಹಾರಾಷ್ಟ್ರದಲ್ಲಿ ಏಕಾಂಗಿಯಾಗಿ ಸರ್ಕಾರ ರಚನೆ ಸಾಧ್ಯವಿಲ್ಲ: ಬಿಜೆಪಿ

ಮಹಾರಾಷ್ಟ್ರದಲ್ಲಿ ಯಾವ ಪಕ್ಷಕ್ಕೂ ಪೂರ್ಣ ಬಹುಮತ ಲಭಿಸಿಲ್ಲ. ಹೀಗಾಗಿ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಮುಂಬೈ: ಮಹಾರಾಷ್ಟ್ರದಲ್ಲಿ ಯಾವ ಪಕ್ಷಕ್ಕೂ ಪೂರ್ಣ ಬಹುಮತ ಲಭಿಸಿಲ್ಲ. ಹೀಗಾಗಿ ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿದೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟಕ್ಕೆ ಮಹಾರಾಷ್ಟ್ರ ಜನತೆ ಬೆಂಬಲ ನೀಡಿದೆ. ಹೀಗಾಗಿ ಶಿವಸೇನೆ ಇಲ್ಲದೇ ನಾವು ಏಕಾಂಗಿಯಾಗಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಶಿವಸೇನೆ ತನ್ನ ಉದ್ಧಟತನದಿಂದ ಜನತೆಯ ಆದೇಶವನ್ನು ಉಲ್ಲಂಘಿಸುತ್ತಿದೆ. ಎನ್ ಸಿಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಅಪವಿತ್ರ ಮೈತ್ರಿ ಮೂಲಕ ಸರ್ಕಾರ ರಚನೆಗೆ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಇನ್ನು ಇಂದು ಮಹಾರಾಷ್ಟ್ರದ ಹಂಗಾಮಿ ಸಿಎಂ ದೇವೇಂದ್ರ ಫಡ್ನವಿಸ್ ಮತ್ತು ಹಿರಿಯ ಬಿಜೆಪಿ ನಾಯಕರು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಅಲ್ಲದೆ ಭೇಟಿ ವೇಳೆ ತಾವು ಏಕಾಂಗಿಯಾಗಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ ಎಂಬ ವಿಚಾರವನ್ನೂ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ತಾವು ಸರ್ಕಾರ ರಚನೆಗೆ ಸಿದ್ಧವಾಗಿದ್ದರೂ ಶಿವಸೇನೆ ಬೆಂಬಲ ನೀಡುತ್ತಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com