ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾಜಧಾನಿ ಶ್ರೀನಗರದಿಂದ ಕೇವಲ 55 ಕಿಮೀ ದೂರದಲ್ಲಿರುವ ಲಾವ್ಡಾರಾ ಗ್ರಾಮದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯ್ಯಲಾಗಿತ್ತು.
ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಸೈನಿಕರನ್ನು ಕಂಡ ಉಗ್ರರು ಗುಂಡಿನ ಸುರಿಮಳೆ ಗರೆದಿದ್ದಾರೆ. ಇದಕ್ಕೆ ಸೇನೆ ಕೂಡ ಪ್ರತ್ಯುತ್ತರ ನೀಡಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಪ್ರದೇಶದಲ್ಲಿ ಮೂರಕ್ಕೂ ಹೆಚ್ಚು ಉಗ್ರರು ಇರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.
Advertisement