ಎನ್ ಡಿಎಗೆ ಶಿವಸೇನೆ ಗುಡ್ ಬೈ? ಕೇಂದ್ರ ಸಚಿವ ಸ್ಥಾನಕ್ಕೆ ಸಂಸದ ಅರವಿಂದ್ ಸಾವಂತ್ ರಾಜಿನಾಮೆ!

ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವಿನ ಸರ್ಕಾರ ರಚನೆ ತಿಕ್ಕಾಟ ತಾರಕಕ್ಕೇರಿರುವಂತೆಯೇ  ಶಿವಸೇನಾ ಸಂಸದ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಅರವಿಂದ್‌ ಸಾವಂತ್‌ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಬಿಜೆಪಿ ನಡುವಿನ ಸರ್ಕಾರ ರಚನೆ ತಿಕ್ಕಾಟ ತಾರಕಕ್ಕೇರಿರುವಂತೆಯೇ  ಶಿವಸೇನಾ ಸಂಸದ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಅರವಿಂದ್‌ ಸಾವಂತ್‌ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಸಂಪುಟದಿಂದ ಹೊರ ಬಂದಿರುವುದಾಗಿ ಸೋಮವಾರ ಹೇಳಿದ್ದಾರೆ. ತಾವು ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಂತೆಯೇ ತಾವು ಧರ್ಮದ ಪರವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ನಾನು ಕೇಂದ್ರ ಸರ್ಕಾರದಲ್ಲಿ ಮುಂದುವರೆಯುವುದು ಸರಿಯಲ್ಲ. ಹೀಗಾಗಿ ನಾನು ನನ್ನ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ಇಂದು ಬೆಳಗ್ಗೆ 11 ಗಂಟೆಗೆ ಈ ಕುರಿತಂತೆ ಸುದ್ದಿಗೋಷ್ಠಿ ನಡೆಸುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಮಹಾರಾಷ್ಟ್ರದಲ್ಲಿ ಶಿವಸೇನಾಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿರುವ ಬೆನ್ನಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶಿವಸೇನಾ ಸರ್ಕಾರ ರಚನೆಗಾಗಿ ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಬೆಂಬಲ ಕೋರುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com