ರಫೇಲ್ ತೀರ್ಪು: ಜಂಟಿ ಸಂಸದೀಯ ಸಮಿತಿಯಿಂದ ತನಿಖೆಗೆ ರಾಹುಲ್ ಒತ್ತಾಯ

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಸಂಬಂಧ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಸಂಬಂಧ ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಫ್ರೆಂಚ್ ನ ಡಾಸಾಲ್ಟ್ ವಿಮಾನಯಾನ ಕಂಪನಿಯಿಂದ 36 ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ಮೋದಿ ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದ ಬಳಿಕ ರಾಹುಲ್ ಗಾಂಧಿ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ಸಲ್ಲಿಸಲಾಗಿದ್ದ ಮರು ಪರಿಶೀಲನಾ ಅರ್ಜಿಯಲ್ಲಿ ಯಾವುದೇ ಅರ್ಹ ಅಂಶಗಳು ಕಂಡುಬಾರದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ರಂಜನ್ ಗೋಗೊಯ್  ನೇತೃತ್ವದಲ್ಲಿನ ತ್ರಿಸದಸ್ಯ ಪೀಠ ವಜಾಗೊಳಿಸಿತ್ತು. 

ರಫೇಲ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಬೃಹತ್ ಬಾಗಿಲು ತೆರೆದಿದೆ. ಪ್ರಾಮಾಣಿಕ ರೀತಿಯಲ್ಲಿ ತನಿಖೆ ನಡೆಸಬೇಕಾಗಿದೆ. ಈ ಹಗರದ ತನಿಖೆಗೆ ಜಂಟಿ ಸಂಸದೀಯ ಸಮಿತಿಯೊಂದನ್ನು ರಚಿಸಲಾಗಿದೆ ಎಂದು  ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ರಫೇಲ್ ಒಪ್ಪಂದದ ತನಿಖೆಗೆ ಸುಪ್ರೀಂಕೋರ್ಟ್ ಹಾದಿ ಮಾಡಿಕೊಟ್ಟಿದ್ದು, ಬಿಜೆಪಿ ಸಂಭ್ರಮಾಚರಣೆಯನ್ನು ನಿಲ್ಲಿಸಿ ತನಿಖೆಯತ್ತ ಗಮನ ಹರಿಸಬೇಕೆಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜಿವಾಲಾ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ವಿಚಾರದಲ್ಲಿ ಬಿಜೆಪಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com