ರಾಜಕೀಯ ಮತ್ತು ಕ್ರಿಕೆಟ್ ನಲ್ಲಿ ಯಾವಾಗ ಏನು ಬೇಕಾದರು ಸಂಭವಿಸಬಹುದು: ನಿತಿನ್ ಗಡ್ಕರಿ

ದೇಶದ ಜನರು ಅತೀ ಹೆಚ್ಚು ಪ್ರೀತಿಸುವ ಕ್ರಿಕೆಟ್ ಮತ್ತು ರಾಜಕೀಯದಲ್ಲಿ  ಯಾವಾಗ ಏನು ಬೇಕಾದರೂ ಸಂಭವಿಸಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Updated on: 

ಮುಂಬಯಿ:  ದೇಶದ ಜನರು ಅತೀ ಹೆಚ್ಚು ಪ್ರೀತಿಸುವ ಕ್ರಿಕೆಟ್ ಮತ್ತು ರಾಜಕೀಯದಲ್ಲಿ  ಯಾವಾಗ ಏನು ಬೇಕಾದರೂ ಸಂಭವಿಸಬಹುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟಿನ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಹೋಲಿಕೆ ಮೂಲಕ ತಿರುಗೇಟು ನೀಡಿದ್ದಾರೆ. ಕ್ರಿಕೆಟ್ ಎಂಬ  ಫಲಿತಾಂಶ ಹೇಗೆ ನಿರ್ಧಾರವಾಗುತ್ತದೋ ಅದೇ ರೀತಿ ರಾಜಕೀಯದ ಭವಿಷ್ಯ ಕೂಡಾ ಕರಾರುವಕ್ಕಾಗಿ ಹೇಳಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ರಾಜಕೀಯ ಮತ್ತು ಕ್ರಿಕೆಟ್ ನಲ್ಲಿ ಏನು ಬೇಕಾದರೂ ಸಂಭವಿಸಬಹುದು. ಕೆಲವೊಮ್ಮೆ ಪಂದ್ಯ ಸೋಲಬಹುದು ಎಂದು ಲೆಕ್ಕಚಾರ ಹಾಕುತ್ತೀರಿ. ಆದರೆ ಫಲಿತಾಂಶ ಅದಕ್ಕೆ ತದ್ವಿರುದ್ಧವಾಗಿರುತ್ತದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಕ್ಟೋಬರ್ 24ರಂದು ಚುನಾವಣಾ ಫಲಿತಾಂಶ ಘೋಷಣೆಯಾದ ನಂತರ ಮಹಾರಾಷ್ಟ್ರದಲ್ಲಿ ಯಾವ ಪಕ್ಷಕ್ಕೂ ಸರ್ಕಾರ ರಚಿಸಲು ಸಾಧ್ಯವಾಗದೆ, ರಾಷ್ಟ್ರಪತಿ ಆಡಳಿತ ಹೇರಿಕೆಯಾದ ನಂತರ ಈ ಕುರಿತು ಗಡ್ಕರಿ ಅವರಿಗೆ ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com