ಅಯೋಧ್ಯೆ ತೀರ್ಪು: ಮುಸ್ಲಿಂ ಕಾನೂನು ಮಂಡಳಿಯಿಂದ ಪುನರ್ ಪರಿಶೀಲನಾ ಅರ್ಜಿ? 

ಅಯೋಧ್ಯೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೆ, ಬೇಡವೇ ಎಂದು ನಿರ್ಧರಿಸಲು ಅಖಿಲ ಭಾರತ ಮುಸ್ಲಿಂ ಪರ್ಸನಲ್ ಲಾ ಬೋರ್ಡ್(ಎಐಎಂಪಿಎಲ್ ಬಿ) ಭಾನುವಾರ ಸಭೆ ಸೇರಿ ಚರ್ಚೆ ನಡೆಸಿ ತೀರ್ಮಾನಿಸಲಿದೆ.
ಅಯೋಧ್ಯೆ ತೀರ್ಪು: ಮುಸ್ಲಿಂ ಕಾನೂನು ಮಂಡಳಿಯಿಂದ ಪುನರ್ ಪರಿಶೀಲನಾ ಅರ್ಜಿ? 

ಲಕ್ನೊ: ಅಯೋಧ್ಯೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕೆ, ಬೇಡವೇ ಎಂದು ನಿರ್ಧರಿಸಲು ಅಖಿಲ ಭಾರತ ಮುಸ್ಲಿಂ ಪರ್ಸನಲ್ ಲಾ ಬೋರ್ಡ್(ಎಐಎಂಪಿಎಲ್ ಬಿ) ಭಾನುವಾರ ಸಭೆ ಸೇರಿ ಚರ್ಚೆ ನಡೆಸಿ ತೀರ್ಮಾನಿಸಲಿದೆ.


ಈ ಕುರಿತು ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಮೌಲಾನಾ ಸುಫಿಯಾನ್, ಕೆಲವು ಸಂಘಟನೆಗಳು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿವೆ. ನಾವು ಇಂದು ಸಭೆ ಸೇರಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ, ಬೇಡವೇ ಎಂದು ನಿರ್ಧರಿಸಲಿದ್ದೇವೆ. ಇಂದು ಸಂಜೆ ಮಾಧ್ಯಮಗಳಿಗೆ ನಮ್ಮ ಅಂತಿಮ ನಿರ್ಧಾರ ತಿಳಿಸಲಿದ್ದೇವೆ ಎಂದರು.


ಕಳೆದ ಶನಿವಾರ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿವಾದಿತ ಅಯೋಧ್ಯೆ ಭೂಮಿಯಲ್ಲಿ ಕೇಂದ್ರ ಸರ್ಕಾರ ದೇವಸ್ಥಾನವನ್ನು ನಿರ್ಮಿಸಿ ಟ್ರಸ್ಟ್ ನ್ನು ಸ್ಥಾಪಿಸಬೇಕು. 5 ಎಕರೆ ಭೂಮಿಯನ್ನು ಅಯೋಧ್ಯೆಯಲ್ಲಿ ಸುನ್ನಿ ವಕ್ಫ್ ಬೋರ್ಡ್ ಗೆ ನೀಡಬೇಕು ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com