ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ
ಜೆಎನ್ ಯು ವಿದ್ಯಾರ್ಥಿಗಳ ಪ್ರತಿಭಟನೆ

ದೆಹಲಿ: ತಾರಕಕ್ಕೇರಿದ ಜೆಎನ್ ಯು ಪ್ರತಿಭಟನೆ, ಸಂಸತ್ತಿಗೆ ಮೆರವಣಿಗೆ ಹೊರಟ ವಿದ್ಯಾರ್ಥಿಗಳನ್ನು ತಡೆದ ಪೊಲೀಸರು 

ಹಾಸ್ಟೆಲ್ ಶುಲ್ಕ ಹೆಚ್ಚಳ ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ, ಭಿತ್ತಿಚಿತ್ರಗಳನ್ನು ಹೊತ್ತು ಸಾಗಿ ಸೋಮವಾರ ಸಂಸತ್ತಿನತ್ತ ಮೆರವಣಿಗೆ ಸಾಗಿದರು.

ನವದೆಹಲಿ: ಹಾಸ್ಟೆಲ್ ಶುಲ್ಕ ಹೆಚ್ಚಳ ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ, ಭಿತ್ತಿಚಿತ್ರಗಳನ್ನು ಹೊತ್ತು ಸಾಗಿ ಸೋಮವಾರ ಸಂಸತ್ತಿನತ್ತ ಮೆರವಣಿಗೆ ಸಾಗಿದರು.


ಆದರೆ ವಿಶ್ವವಿದ್ಯಾಲಯದ ಕ್ಯಾಂಪಸ್ ನಿಂದ ಮುಂದೆ ಸಾಗಿ ಅರ್ಧ ಕಿಲೋ ಮೀಟರ್ ದೂರದಲ್ಲಿ ದಕ್ಷಿಣ ದೆಹಲಿಯಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿದರು.


ಕಳೆದ ಮೂರು ವಾರಗಳಿಂದ ವಿಶ್ವವಿದ್ಯಾಲಯದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಇಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ ದಿನ ರಸ್ತೆಗಳಿದು ಪ್ರತಿಭಟನೆ ನಡೆಸಿದರು. ಸರ್ಕಾರ ಶುಲ್ಕ ವೆಚ್ಚಳವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವವರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹೇಳಿದ್ದಾರೆ.


ನೂರಾರು ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳನ್ನು ಬಾಬಾ ಗಂಗನಾಥ್ ಮಾರ್ಗ್ ನಲ್ಲಿ ತಡೆದು ನಿಲ್ಲಿಸಿದರು. ಕೆಲವರನ್ನು ಮುಂದೆ ಹೋಗುವುದಕ್ಕೆ ತಡೆಹಿಡಿಯಲಾಯಿತು. ಪ್ರತಿಭಟನಾ ನಿರತ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. 

Related Stories

No stories found.

Advertisement

X
Kannada Prabha
www.kannadaprabha.com