ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ಸರ್ಕಾರ ರಚನೆ: ತುರ್ತು ಸಭೆ ಕರೆದ ಕಾಂಗ್ರೆಸ್ 

ಮಹಾರಾಷ್ಟ್ರದಲ್ಲಿನ ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಕಾಂಗ್ರೆಸ್ ಶನಿವಾರ ಪಕ್ಷ ಕಚೇರಿಯಲ್ಲಿ ತುರ್ತು ಸಭೆ ಕರೆದಿದೆ. ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ ಸಿ ವೇಣುಗೋಪಾಲ್ ಸಭೆಯಲ್ಲಿ ಹಾಜರಿರುತ್ತಾರೆ. 
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಮುಂಬೈ: ಮಹಾರಾಷ್ಟ್ರದಲ್ಲಿನ ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಕಾಂಗ್ರೆಸ್ ಶನಿವಾರ ಪಕ್ಷ ಕಚೇರಿಯಲ್ಲಿ ತುರ್ತು ಸಭೆ ಕರೆದಿದೆ. ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ ಸಿ ವೇಣುಗೋಪಾಲ್ ಸಭೆಯಲ್ಲಿ ಹಾಜರಿರುತ್ತಾರೆ.


ಬಿಜೆಪಿಯ ದೇವೇಂದ್ರ ಫಡ್ನವಿಸ್ ಸತತ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು.


ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಸರ್ಕಾರ ರಚಿಸಲು ಅಂತಿಮ ಘಟ್ಟಕ್ಕೆ ಬಂದ ಹೊತ್ತಿನಲ್ಲಿ ಈ ದಿಢೀರ್ ಬೆಳವಣಿಗೆ ನಡೆದಿದೆ. ಅಕ್ಟೋಬರ್ 24ರಂದು ಫಲಿತಾಂಶ ಹೊರಬಂದ ಮೇಲೆ ಬಿಜೆಪಿಗೆ ಸ್ವಂತ ಬಲದಿಂದ ಸರ್ಕಾರ ರಚಿಸಲು ಸಾಧ್ಯವಾಗಿರಲಿಲ್ಲ. ಶಿವಸೇನೆ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿತ್ತು. ಅದು ಹೊಂದಾಣಿಕೆ ಬಾರದ ಹಿನ್ನಲೆಯಲ್ಲಿ ಸರ್ಕಾರ ರಚಿಸಲು ಸಾಧ್ಯವಾಗದೆ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿತ್ತು.


ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 105 ಸ್ಥಾನಗಳನ್ನು, ಶಿವಸೇನೆ 56, ಎನ್ ಸಿಪಿ 54 ಮತ್ತು ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com