ಬೆಂಗಳೂರು: ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿಯವರು ಅನರ್ಹ ಶಾಸಕರಿಗೆ ಕೊಟ್ಯಂತರ ರೂ ಹಣ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಯಶವಂತಪುರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುವವರಿಂದ ಹಣ ಸಂಗ್ರಹಿಸಿ ಆ ಹಣವನ್ನೇ ಅನರ್ಹ ಶಾಸಕರಿಗೆ ಕೊಟ್ಟಿದ್ದಾರೆ ಎಂದು ಅಪಾದಿಸಿದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ನೈಟ್ ಕ್ಲಬ್ ಮತ್ತು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಿಲ್ಲಿಸಲು ಕಠಿಣ ಕ್ರಮ ಕೈಗೊಂಡಿದ್ದೆ.ಆದರೆ ಈಗ ದಂಧೆಗಳನ್ನು ಪುನರಾರಂಭಿಸಲು ದಂಧೆಕೋರರಿಗೆ ಸಹಾಯ ಮಾಡುವುದಾಗಿ ಬಿಜೆಪಿಯವರು ವಾಗ್ದಾನ ಮಾಡಿ ಹಣ ವಸೂಲಿ ಮಾಡಿದ್ದಾರೆ ಎಂದು ಸ್ಪೋಟಕ ಮಾಹಿತಿ ನೀಡಿದರು.
Advertisement