ಸಾಂಭಲ್: ಹೈದರಾಬಾದ್ ನ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮತ್ತೊಂದು ಭೀಕರ ಗ್ಯಾಂಗ್ ರೇಪ್ ಅತ್ಯಾಚಾರ ಪ್ರಕರಣ ವರದಿಯಾಗಿದೆ.
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ 16 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿ ಸಾಯಿಸಲಾಗಿದೆ. ಗಾಯಗೊಂಡಿದ್ದ ಸಂತ್ರಸ್ತ ಬಾಲಕಿ ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ತಾಯಿ ಹಾಗೂ ಸಹೋದರ ಸಮಾರಂಭದಲ್ಲಿ ಭಾಗಿಯಾಗುವುದಕ್ಕೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಯ ಮೇಲೆ ನೆರೆ ಮನೆಯವರೇ ನ.21 ಅತ್ಯಾಚಾರವೆಸಗಿದ್ದು ಬೆಂಕಿ ಹಚ್ಚಿದ್ದಾರೆ. ಶೇ.70 ರಷ್ಟು ಸುಟ್ಟ ಗಾಯಗಳಾಗಿದ್ದ ಬಾಲಕಿಯನ್ನು ದೆಹಲಿಯ ಸಫ್ತರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ತಿದ್ದಾಳೆ.
ಅತ್ಯಾಚಾರಿಗಳ ವಿರುದ್ಧ ಪೊಲೀಸ್ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ ಇದನ್ನು ಕೇಳಿದ ಬೆನ್ನಲ್ಲೇ ಕಿಡಿಗೇಡಿ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಅತ್ಯಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಅಪರಾಧಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
Advertisement