ಮಹಾರಾಷ್ಟ್ರ ಚುನಾವಣೆ: 125 ಅಭ್ಯರ್ಥಿಗಳ ಬಿಜೆಪಿ ಪಟ್ಟಿ ಬಿಡುಗಡೆ, ಶಿವಸೇನೆಯೊಂದಿಗೆ ಮೈತ್ರಿ ಖಚಿತ

ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮಂಗಳವಾರ 125 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಶಿವಸೇನೆ ಹಾಗೂ ಇತರೆ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದೆ.
ದೇವೇಂದ್ರ ಫಡ್ನವೀಸ್ ಮತ್ತು ಉದ್ಧವ್ ಠಾಕ್ರೆ
ದೇವೇಂದ್ರ ಫಡ್ನವೀಸ್ ಮತ್ತು ಉದ್ಧವ್ ಠಾಕ್ರೆ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಮಂಗಳವಾರ 125 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ ಮತ್ತು ಶಿವಸೇನೆ ಹಾಗೂ ಇತರೆ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಗಪುರ್ ನೈರುತ್ಯ ವಿಧಾನಸಭಾ ಕ್ಷೇತ್ರದಿಂದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಕೊತ್ರುಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರ್ಜುನ್ ಸಿಂಗ್ ಅವರು, ಒಟ್ಟು 12 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ ಎಂದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಇತರೆ ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಅರ್ಜುನ್ ಸಿಂಗ್ ಅವರು ತಿಳಿಸಿದ್ದಾರೆ.

ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com