ಕೇಂದ್ರದಿಂದ ನೆರೆ ಪರಿಹಾರ ಸಿಗದಿದ್ದರೂ ಮನೆಗಳ ನಿರ್ಮಾಣಕ್ಕೆ ಆದೇಶಿಸಿದ ಸಿಎಂ ಯಡಿಯೂರಪ್ಪ

ಪ್ರವಾಹದಿಂದಾಗಿ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡದಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತ್ರಸ್ತರ ಮನೆಗಳ ನಿರ್ಮಾಣಕ್ಕೆ ಗುರುವಾರ ಆದೇಶ ನೀಡಿದ್ದಾರೆ. 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಳಗಾವಿ: ಪ್ರವಾಹದಿಂದಾಗಿ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರ ನೆರೆ ಪರಿಹಾರ ಬಿಡುಗಡೆ ಮಾಡದಿದ್ದರೂ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತ್ರಸ್ತರ ಮನೆಗಳ ನಿರ್ಮಾಣಕ್ಕೆ ಗುರುವಾರ ಆದೇಶ ನೀಡಿದ್ದಾರೆ. 

ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿರುವ ಯಡಿಯೂರಪ್ಪ ಅವರು, ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಸರ್ಕಾರ ಈಗಾಗಲೇ ಮೊದಲ ಕಂತಿನಲ್ಲಿ ರೂ.1ಲಕ್ಷಗಳ ವರೆಗೆ ಖಾತೆಗಳಿಗೆ ಜಮಾ ಮಾಡಿದೆ. ಸಂಪೂರ್ಣವಾಗಿ ನೆಲಕಚ್ಚಿರುವ ಮನೆಗಳಿಗೆ ರೂ.5 ಲಕ್ಷ ನೀಡಲು ಸರ್ಕಾರ ಬದ್ಧವಾಗಿದೆ. ಸುರಕ್ಷಿತವಲ್ಲದ ಮನೆಗಳನ್ನು ಪುನರ್ ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಲಾಗಿದೆ ಎಂದು ಹೇಳಿದ್ದಾರೆ. 

ವಿಳಂಬವಿಲ್ಲದೆ ನಮ್ಮ ಸರ್ಕಾರ ನೆರೆ ಸಂತ್ರಸ್ತರ ಕುಟುಂಬಗಳ ಕುರಿತು ಈಗಾಗಲೇ ಸೂಕ್ತ ಕ್ರಮಗಳನ್ನು ಕೈಗೊಂಡಿದೆ. ಎನ್'ಡಿಆರ್'ಎಫ್ ಮಾರ್ಗಸೂಚಿಯನ್ವಯ ಬೆಳೆಹಾನಿಯ ಪರಿಹಾರ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಅನುಮಾನ ಬಿಡುಗಡೆ ಮಾಡಬೇಕಿದೆ. ನಮಗೆ ಹೆಚ್ಚಿನ ಪರಿಹಾರ ನೀಡಲಾಗದು. ರಾಜ್ಯ ಸರ್ಕಾರದ ಖಚಾನೆ ಎಲ್ಲಾ ಖಾಲಿಯಾಗಿದೆ. ಪ್ರತ್ಯೇಕ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್'ಗಳನ್ನು ಹೊಂದಿ ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವವರಿಗೂ ನಿವೇಶನ ಅಥವಾ ಮನೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು. ವಾಸಕ್ಕೆ ಯೋಗ್ಯವಲ್ಲದ ಮನೆಗಳನ್ನು ಎ.ಕೆಟಗರಿ ಎಂದು ಪರಿಗಣಿಸಿ ರೂ. 5 ಲಕ್ಷ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ನೆರೆ ಪರಿಹಾರಕ್ಕೆ ಕೇಂದ್ರ ಹಣ ಬಿಡುಗಡೆ ಮಾಡಿಲ್ಲವೆಂದು ಕೈಕಟ್ಟಿ ಕುಳಿತುಕೊಂಡಿಲ್ಲ. ಈಗಾಗಲೇ ಮೂರೂವರಿ ಸಾವಿರ ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚು ಹಣ ಬಿಡುಗಡೆ ಮಾಡುತ್ತೇವೆ. ಇದು ನಮ್ಮ ಕರ್ತವ್ಯ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com