ಆಂಧ್ರ ಪ್ರದೇಶ ಸಮಾಜ ಕಲ್ಯಾಣ ಸಚಿವರ ನಿವಾಸದ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ!

ಸಮಾಜ ಕಲ್ಯಾಣ ಇಲಾಖೆ ಸಚಿವ ಪಿನಿಪೆ ವಿಶ್ವರೂಪ ಅವರ ನಿವಾಸದ ಹೊರಗೆ 25 ವರ್ಷದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಕಾಕಿನಾಡ: ಸಮಾಜ ಕಲ್ಯಾಣ ಇಲಾಖೆ ಸಚಿವ ಪಿನಿಪೆ ವಿಶ್ವರೂಪ ಅವರ ನಿವಾಸದ ಹೊರಗೆ 25 ವರ್ಷದ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.


ಅತ್ತೆ -ಮಾವನಿಂದ ನಿರಂತರವಾಗಿ ಕಿರುಕುಳಕ್ಕೀಡಾಗುತ್ತಿದ್ದರಿಂದ ಬೇಸತ್ತು ಇಬ್ಬರು ಮಕ್ಕಳ ತಾಯಿಯಾದ ಸಕಿಲ್ ಮಲ್ಲೇಶ್ವರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳೆ ಅಮಲಾಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 


ಪೊಲೀಸರು ಎಷ್ಟೇ ಬಾರಿ ಬುದ್ದಿವಾದ ಹೇಳಿದರೂ ತಮ್ಮ ಅತ್ತೆ-ಮಾವ ಕಿರುಕುಳ ನೀಡುವುದನ್ನು ನಿಲ್ಲಿಸಲಿಲ್ಲ. ಈ ಹಿಂದೆ ಕೂಡ ಸಚಿವರು ಮತ್ತು ಪೊಲೀಸರಿಗೆ ದೂರು ನೀಡಿ ಅತ್ತೆ-ಮಾವನ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ನಿನ್ನೆ ಈ ಕೃತ್ಯಕ್ಕೆ ಇಳಿದಿದ್ದಾರೆ.


ನಿನ್ನೆ ಸಚಿವರ ಬಳಿ ಹೋಗಿ ದೂರು ನೀಡಿದಾಗ ಸಚಿವರಿಂದ ಸರಿಯಾದ ಸ್ಪಂದನೆ ಸಿಗದ ಹಿನ್ನಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸಚಿವರ ಸಿಬ್ಬಂದಿ ಮತ್ತು ಸ್ಥಳೀಯರು ಮಹಿಳೆಯರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com