

ನವದೆಹಲಿ: ಭಾರತೀಯ ವಾಯುಪಡೆಯ 87ನೇ ವಾರ್ಷಿಕ ದಿನಾಚರಣೆ ಅಂಗವಾಗಿ ಶುಭ ಕೋರಿದ ಗೃಹ ಸಚಿವ ಅಮಿತ್ ಶಾ ವಾಯುಪಡೆ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿದೆ ಎಂದು ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, ತಾಯ್ನಾಡಿನ ರಕ್ಷಣೆಗೆ ಭಾರತೀಯ ವಾಯುಪಡೆ ತೋರಿಸುವ ಬದ್ಧತೆ ಮತ್ತು ಸಮರ್ಪಣಾ ಮನೋಭಾವನೆ ಬಗ್ಗೆ ಇಡೀ ದೇಶಕ್ಕೆ ಹೆಮ್ಮೆಯಿದೆ ಎಂದಿದ್ದಾರೆ.