ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಕುಟುಂಬ ಸದಸ್ಯರ ಹತ್ಯೆ: ಬಿಜೆಪಿ ಖಂಡನೆ

ಮುರ್ಷಿದಾಬಾದ್ ನ ಜಿಯಾಗಂಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಪ್ರಕಾಶ್ ಪಾಲ್, ಅವರ ಗರ್ಭಿಣಿ ಪತ್ನಿ ಹಾಗೂ ೮ ವರ್ಷದ ಪುತ್ರನನ್ನು ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಆರ್ ಎಸ್ ಎಸ್ ಕಾರ್ಯಕರ್ತನ ಕುಟುಂಬ
ಹತ್ಯೆಯಾದ ಆರ್ ಎಸ್ ಎಸ್ ಕಾರ್ಯಕರ್ತನ ಕುಟುಂಬ
Updated on

ನವದೆಹಲಿ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಗುರುವಾರ ವಾಗ್ದಾಳಿ ನಡೆಸಿದೆ.  ದೀದಿ ನಿಮ್ಮ ರಾಜ್ಯದಲ್ಲಿ ಏನಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ.  

ಮುರ್ಷಿದಾಬಾದ್ ನ ಜಿಯಾಗಂಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಪ್ರಕಾಶ್ ಪಾಲ್, ಅವರ ಗರ್ಭಿಣಿ ಪತ್ನಿ ಹಾಗೂ ೮ ವರ್ಷದ ಪುತ್ರನನ್ನು ಹತ್ಯೆ ಮಾಡಲಾಗಿದೆ.  ಇದಕ್ಕಿಂತ ಹೀನಾಯ ಕೃತ್ಯ ನಡೆಯಬೇಕೆ? ಎಂದು ವಿಜಯ ವರ್ಗೀಯ ಪ್ರಶ್ನಿಸಿದ್ದಾರೆ. 

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರಮಟ್ಟಿಗೆ ಹದಗೆಟ್ಟಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ ಎಂದಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ಪ್ರಕಾಶ್ ಪಾಲ್ ಮತ್ತು ಅವರ ಪತ್ನಿ, ಪುತ್ರನನ್ನು ಹರಿತವಾದ ಆಯುಧದಿಂದ ಇರಿದು ಕೊಂದಿದ್ದಾರೆ. ಈ ಘಟನೆಯ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ ಹಮ್ಮಿಕೊಂಡಿದೆ
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com