ಮಲಗಿದ್ದ ಭಕ್ತಾದಿಗಳ ಮೇಲೆ ಹರಿದ ಬಸ್: ಮೂರು ಮಕ್ಕಳು ಸೇರಿದಂತೆ 7ಮಂದಿ ದುರ್ಮರಣ

ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬುಲಂದ್ ಶಹರ್: ಮಲಗಿದ್ದ ಭಕ್ತಾದಿಗಳ ಮೇಲೆ ಬಸ್ ಹರಿದ ಪರಿಣಾಮ  ನಾಲ್ವರು ಮಹಿಳೆಯರು, ಮೂರು ಮಕ್ಕಳು ಸೇರಿದಂತೆ ಏಳು ಜನರು ಮೃತಪಟ್ಟಿರುವ ದಾರುಣ ಘಟನೆ ಉತ್ತರಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ.

ತೀರ್ಥಯಾತ್ರೆಗೆಂದು ಗಂಗಾಘಾಟ್ ಗೆ ಬಂದಿದ್ದ ಜನರು ಪಾದಚಾರಿ ಮಾರ್ಗದಲ್ಲಿ ಮಲಗಿದ್ದರು. ಈ ವೇಳೆ ಖಾಸಗಿ ಬಸ್ಸೊಂದು ಅವರ ಮೇಲೆ ಹರಿದು ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಉತ್ತರಪ್ರದೇಶದ ಹತ್ರಾಸ್ ಮೂಲದವರು ಎಂದು ತಿಳಿದುಬಂದಿದೆ. ವೈಷ್ಣೋದೇವಿ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ, ಅಪಘಾತದ ನಂತರ ಬಸ್ ಚಾಲಕ ಪರಾರಿಯಾಗಿದ್ದು ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com