ಬೆಳ್ಳಂ ಬೆಳಗ್ಗೆ ಮಹಾಬಲಿಪುರಂ ಬೀಚ್‌ನಲ್ಲಿ ಪ್ರಧಾನಿ ಮೋದಿಯಿಂದ 'ಸ್ವಚ್ಛ ಭಾರತ', ವಿಡಿಯೋ!

ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಹಾಬಲಿಪುರಂನಲ್ಲಿ ತಂಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಂ ಬೆಳಗ್ಗೆ ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ನರೇಂದ್ರ ಮೋದಿ
ನರೇಂದ್ರ ಮೋದಿ
Updated on: 

ಮಹಾಬಲಿಪುರಂ: ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಹಾಬಲಿಪುರಂನಲ್ಲಿ ತಂಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಂ ಬೆಳಗ್ಗೆ ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. 

ಪ್ರಧಾನಿ ಮೋದಿ ಅವರು ಬೀಚ್ ನಲ್ಲಿ ನಡೆದಾಡುತ್ತಿದ್ದಾಗ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳು ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಅವುಗಳನ್ನು ಹೆಕ್ಕಿ ಪ್ಲಾಸ್ಟಿಕ್ ಕವರ್ ನಲ್ಲಿ ತುಂಬಿಕೊಂಡು ಬಂದು ಬೀಚ್‌ನಲ್ಲಿದ್ದ ಹೋಟೆಲ್ ಸಿಬ್ಬಂದಿಗೆ ಕೊಟ್ಟಿದ್ದಾರೆ. ಇದೇ ವೇಳೆ ಬೀಚ್ ಅನ್ನು ಸ್ವಚ್ಛವಾಗಿಡುವಂತೆ ಉಪದೇಶವನ್ನು ಪ್ರಧಾನಿ ಮೋದಿ ಮಾಡಿದ್ದಾರೆ.  

ಇಂದು ಕ್ಸಿ ಜಿನ್ ಪಿಂಗ್ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆಗಳು ನಡೆಯಲಿವೆ. ಚೀನಾ ಅಧ್ಯಕ್ಷರ ಈ ಭೇಟಿಯಿಂದ ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ಭಾಂದವ್ಯವೂ ವೃದ್ಧಿಯಾಗುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com