ಮೂತ್ರ ವಿಸರ್ಜನೆಗೂ ಬಿಡದ ಕಾಮುಕರು, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಮಧ್ಯ ಪ್ರದೇಶದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬಹಿರ್ದೆಸೆಗೆ ತೆರಳಿದ್ದ ಮಹಿಳೆಯನ್ನು ಎಳೆದೊಯ್ದು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಭೋಪಾಲ್: ಮಧ್ಯ ಪ್ರದೇಶದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬಹಿರ್ದೆಸೆಗೆ ತೆರಳಿದ್ದ ಮಹಿಳೆಯನ್ನು ಎಳೆದೊಯ್ದು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದಿದ್ದಾರೆ.

ಭೋಪಾಲ್ ನಲ್ಲಿ ದುರ್ಗಾಮಾತೆ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಲು ಹೋಗಿದ್ದ ವಿವಾಹಿತ ಮಹಿಳೆ ಮೂತ್ರ ವಿಸರ್ಜನೆಗೆಂದು ಅಲ್ಲಿನ ರೈಲ್ವೆ ನಿಲ್ದಾಣದ ಬಳಿ ನಿರ್ಜನ ಪ್ರದೇಶಕ್ಕೆ ಹೋದಾಗ ಅಲ್ಲಿಯೇ ಇದ್ದ ನಾಲ್ವರು ಆರೋಪಿಗಳು ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ.

ಬಳಿಕ ವಿಚಾರ ಯಾರಿಗೂ ಹೇಳದಂತೆ ಹೇಳಿದರೆ ಕೊಂದು ಹಾಕುವುದಾಗಿ ಬೆದರಿಸಿದ ಕಾಮುಕರು, ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಇನ್ನು ಭಯದಿಂದ ವಿಚಾರವನ್ನು ಯಾರಿಗೂ ಹೇಳದ ಮಹಿಳೆ, ಬಳಿಕ ತನ್ನ ಪತಿಯೊಂದಿಗೆ ಈ ವಿಚಾರ ಬಹಿರಂಗ ಪಡಿಸಿದ್ದಾರೆ. ಕೂಡಲೇ ಆಕೆಯ ಪತಿ ಪೊಲೀಸರಿಗೆ ದೂರು ನೀಡಿದ್ದು, ಸಂತ್ರಸ್ಥೆಯ ಪತಿ ನೀಡಿದ ದೂರಿನ ಅನ್ವಯ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಾದ ಧರ್ಮೇಂದ್ರ, ವಿಕ್ರಂ ಕರೋಸಿಯಾ, ರಾಜೇಶ್ ಖರೆ ಮತ್ತು ರಾಕೇಶ್ ಕರೋಸಿಯಾ ಎಂಬುವರರನ್ನು ವಶಕ್ಕೆ ಪಡೆದಿದ್ದಾರೆ.

ಈ ನಾಲ್ವರು ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಖಾಸಗಿ ಏಜೆನ್ಸಿ ಮೂಲಕ ನೇಮಕವಾದ ನೌಕರರು ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ಥ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿ ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com