ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರನ್ನು ಹೊಡೆದು ಹಾಕಿದೆ.
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಜಲ್ಪೋರಾದಲ್ಲಿ ಅವಿತಿದ್ದ ಉಗ್ರರನ್ನು ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಹೊಡೆದುರುಳಿಸಿದೆ. ಇಂದು ಮುಂಜಾನೆ ಅನಂತ್ ನಾಗ್ ನ ಪಜಲ್ಪೋರಾದಲ್ಲಿರುವ ಮನೆಯಲ್ಲಿ ಉಗ್ರರು ಅವಿತಿರುವ ಕುರಿತು ಮಾಹಿತಿ ಪಡೆದ ಯೋಧರು ಕೂಡಲೇ ಶಂಕಿತ ಮನೆಯನ್ನು ಸುತ್ತುವರೆದಿದ್ದಾರೆ. ಈ ವೇಳೆ ಸೈನಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದರು. ಈ ವೇಳೆ ಸೈನಿಕರು ಕೂಡ ಪ್ರತಿ ದಾಳಿ ನಡೆಸಿದ್ದು, ಸೈನಿಕರ ದಾಳಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ.
ಮೃತ ಉಗ್ರರರನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗುತ್ತಿದ್ದು, ಮೂವರ ಪೈಕಿ ನಾಸಿರ್ ಚಡ್ರು ಉಗ್ರ ಸಂಘಟನೆಯ ಕಮಾಂಡರ್ ಆಗಿದ್ದ ಎಂದು ತಿಳಿದುಬಂದಿದೆ.
Advertisement