ತೆಲಂಗಾಣ ಸಿಎಂ ಫಾರ್ಮ್ ಹೌಸ್ ನಲ್ಲಿ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ

ಸಿದ್ದಿಪೇಟ್ ಜಿಲ್ಲೆಯ ಈರವಳ್ಳಿಯಲ್ಲಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಫಾರ್ಮ್ ಹೌಸ್ ನಲ್ಲಿ ತೆಲಂಗಾಣ ವಿಶೇಷ ಪೊಲೀಸ್ ಪಡೆಯ ಪೇದೆ ವೆಂಕಟೇಶ್ವರಲು ಅವರು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ವೆಂಕಟೇಶ್ವರಲು
ವೆಂಕಟೇಶ್ವರಲು
Updated on

ಹೈದರಾಬಾದ್: ಸಿದ್ದಿಪೇಟ್ ಜಿಲ್ಲೆಯ ಈರವಳ್ಳಿಯಲ್ಲಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಫಾರ್ಮ್ ಹೌಸ್ ನಲ್ಲಿ ತೆಲಂಗಾಣ ವಿಶೇಷ ಪೊಲೀಸ್ ಪಡೆಯ ಪೇದೆ ವೆಂಕಟೇಶ್ವರಲು ಅವರು ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಪೊಲೀಸ್ ಮೂಲಗಳ ಪ್ರಕಾರ, ಸಿಎಂ ಫಾರ್ಮ್ ಹೌಸ್ ಭದ್ರತೆಗೆ ನಿಯೋಜನೆಗೊಂಡಿದ್ದ 40 ವರ್ಷದ ವೆಂಕಟೇಶ್ವರಲು ಅವರು ಹಿರಿಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com