ಇವಿಎಂ ನ ಯಾವುದೇ ಬಟನ್ ಒತ್ತಿರಿ, ಮತ ಬಿಜೆಪಿಗೆ ಹೋಗುತ್ತದೆ: ಬಿಜೆಪಿ ಶಾಸಕ

ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಅನ್ನು ಹ್ಯಾಕ್ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ, ಹರಿಯಾಣ ವಿಧಾನಸಭಾ ಚುನಾವಣೆಗೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಿಂದ್: ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಅನ್ನು ಹ್ಯಾಕ್ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ, ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಹಾಲಿ ಶಾಸಕರೊಬ್ಬರು, ಇವಿಎಂನಲ್ಲಿ ನೀವು ಯಾವುದೇ ಬಟನ್ ಒತ್ತಿದರೂ ಅದು ಬಿಜೆಪಿಗೆ ಚಲಾವಣೆಯಾಗುತ್ತದೆ ಎಂದು ಹೇಳಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಲ್ಲಿನ ಕರ್ನಾಲ್ ಜಿಲ್ಲೆಯ ಅಸಂದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಕ್ಷಿಷ್ ಶಿಂಗ್ ವಿರ್ಕ್ ಅವರು, ‘ಇಂದು ನೀವು ತಪ್ಪು ಮಾಡಿದರೆ ಐದು ವರ್ಷಗಳ ಕಾಲ ನರಳಾಡುತ್ತೀರಿ. ನಮಗೆ ಯಾರು ಯಾರಿಗೆ ಮತ ಚಲಾಯಿಸಿದ್ದಾರೆ ಎಂದು ತಿಳಿಯುತ್ತದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಅವರು ಜನರ ಬಗ್ಗೆ ತುಂಬಾ ಎಚ್ಚರಿಕೆ ವಹಿಸಿದ್ದಾರೆ ಎಂದಿದ್ದಾರೆ. ಅಲ್ಲದೆ ನೀವು ಯಾವುದೇ ಬಟನ್ ಒತ್ತಿದರು ನಿಮ್ಮ ಮತ ಬಿಜೆಪಿಗೆ ಮಾತ್ರ ಚಲಾವಣೆಯಾಗುತ್ತದೆ. ನಾವು ವಿದ್ಯುನ್ಮಾನ ಯಂತ್ರಗಳನ್ನು ಹಾಗೆ ಸಿದ್ಧಪಡಿಸಿದ್ದೇವೆ’ ಎಂಬ ಹೇಳಿಕೆ ನೀಡಿದ್ದಾರೆ.

ಹರಿಯಾಣ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು, ಮತದಾನಕ್ಕೂ ಮನ್ನಾದಿನ ಬಿಜೆಪಿ ಶಾಸಕ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com