ನ್ಯಾಯಮೂರ್ತಿ ಅರುಣ್ ಮಿಶ್ರಾ
ದೇಶ
ಭೂ ಸ್ವಾಧೀನ ಕಾಯ್ದೆ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ: ನ್ಯಾಯಮೂರ್ತಿ ಅರುಣ್ ಮಿಶ್ರಾ
ಭೂಸ್ವಾಧೀನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಂವಿಧಾನ ಪೀಠದ ವಿಚಾರಣೆಯಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಹಿಂದೆ ಸರಿಯುವುದಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ನವದೆಹಲಿ: ಭೂಸ್ವಾಧೀನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ಸಂವಿಧಾನ ಪೀಠದ ವಿಚಾರಣೆಯಿಂದ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಹಿಂದೆ ಸರಿಯುವುದಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಆದೇಶ ನೀಡಿ, ನಾವು ಈ ವಿಚಾರಣೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದೆ.
ಹಲವು ರೈತಪರ ಸಂಘಟನೆಗಳು ಮತ್ತು ವ್ಯಕ್ತಿಗಳು ಈ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ನಡೆಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದವು, ನ್ಯಾಯಮೂರ್ತಿ ಮಿಶ್ರಾ ಅವರು ತಾವೇ ಈ ಬಗ್ಗೆ ತೀರ್ಪು ನೀಡಿದ್ದರು. ಹೀಗಾಗಿ ಮತ್ತೆ ಅವರನ್ನು ವಿಚಾರಣೆಯಲ್ಲಿ ನೇಮಕ ಮಾಡಬಾರದೆಂದು ಹಲವರು ಆಕ್ಷೇಪಿಸಿದ್ದರು.
ಸಾಂವಿಧಾನಿಕ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ವಿನೀತ್ ಶರನ್, ಎಂ ಆರ್ ಶಾ ಮತ್ತು ಎಸ್ ರವೀಂದ್ರ ಭಟ್ ಕೂಡ ಇದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ